ಉಡುಪಿ | ಬಸ್ಸನ್ನು ಆಸ್ಪತ್ರೆಗೆ ಒಯ್ದು, ಯುವತಿಯ ಜೀವ ಉಳಿಸಿದ ಸರ್ಕಾರಿ ಬಸ್ ಸಿಬ್ಬಂದಿ

Date:

ಬಸ್ಸಿನಲ್ಲಿದ್ದ ಪ್ರಯಾಣಿಸುದ್ದಿ ಯುವತಿಯೊಬ್ಬರು ಅಸ್ವಸ್ಥಗೊಂಡಿದ್ದನ್ನು ಕಂಡ ಸರ್ಕಾರಿ ಬಸ್‌ನ ಸಿಬ್ಬಂದಿಗಳು ಬಸ್‌ಅನ್ನು ನೇರವಾಗಿ ಆಸ್ಪತ್ರೆಗೆ ತಿರುಗಿಸಿದ್ದು, ಯವತಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯುವಂತೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ. ಸಾರಿಗೆ ಸಿಬ್ಬಂದಿಗಳ ಮಾನವೀಯತೆಗೆ ಅಭಿನಂದನೆಯ ಮಹಾಪೂರವೇ ಹರಿದುಬಂದಿದೆ.

ಶಿವಮೊಗ್ಗದಿಂದ ಉಡುಪಿಗೆ ತೆರಳುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಸುರಕ್ಷಾ ಎಂಬ ಯುವತಿ ಪ್ರಯಾಣಿಸುತ್ತಿದ್ದರು. ಬಸ್‌ ಆಗುಂಬೆ ಘಾಟಿಯಲ್ಲಿ ತೆರಳುತ್ತಿದ್ದಾಗ, ಸುರಕ್ಷಾ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ನಿರ್ವಾಹಕ ವಾಸಿಮ್ ದೇಸಾಯಿ ಆಕೆಯ ಸಹಾಯಕ್ಕೆ ಧಾವಿಸಿ, ನೀರು ಕುಡಿಸಿದ್ದರು. ಕೂಡಲೇ ಬಸ್‌ ಚಾಲಕ ತಾರೇಶ್ ಬಸ್‌ಅನ್ನು ಸೋಮೇಶ್ವರದ ಉಪ ಪ್ರಾಥಮಿಕ ಚಿಕಿತ್ಸಾ ಕೇಂದ್ರದೆಡೆಗೆ ಚಲಾಯಿಸಿದ್ದಾರೆ. ಆದರೆ, ಅಲ್ಲಿ ಯುವತಿ ಚೇತಿಸಿಕೊಳ್ಳದ ಹಿನ್ನೆಲೆ, ಬಸ್‌ನಲ್ಲಿಯೇ ಯುವತಿಯನ್ನು ಹೆಬ್ರಿ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಸುರಕ್ಷಾ ಅವರ ಆರೋಗ್ಯ ಚೇತರಿಕೆಗಾಗಿ ಚಾಲಕ ತಾರೇಶ್ ಹಾಗೂ ನಿರ್ವಾಹಕ ವಾಸಿಮ್ ದೇಸಾಯಿ ಬಹಳಷ್ಟು ಶ್ರಮವಹಿಸಿದರು. ಅವರಿಗೆ ಮುಸ್ಲಿಂ ಯುವತಿಯೊಬ್ಬರು ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಮುಸ್ಲಿಂ ಯುವತಿ ಮತ್ತು ಸಿಬ್ಬಂದಿಗಳು ತೋರಿದ ಸಕಾಲಿಕ ಶ್ರಮದಿಂದ ಜೀವ ಉಳಿದಿದ್ದು, ಅವರನ್ನು ಹೆಬ್ರಿಯ ಪೊಲೀಸರು, ಸಾರ್ವಜನಿಕರು ಅಭಿನಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಸಹೋದ್ಯೋಗಿ ವಾಸಿಮ್ ದೇಸಾಯಿ ಯಾವುದನ್ನು ಲೆಕ್ಕಿಸದೆ ಯುವತಿಯನ್ನು ತುರ್ತಾಗಿ ಚಿಕಿತ್ಸೆ ನೀಡಲು ಹೊತ್ತುಕೊಂಡು ಹೋದ ರೀತಿ ನನಗೆ ಕಣ್ಣಲ್ಲಿ ಕಟ್ಟಿದಂತಿದೆ. ಬಸ್‌ನಲ್ಲಿದ್ದ ಸಹ ಪ್ರಯಾಣಿಕ ಮಹಿಳೆಯರು ಸಹಾಯಕ್ಕೆ ಬರಲೇ ಇಲ್ಲ. ಆದರೆ, ಮುಸ್ಲಿಂ ಸಹೋದರಿಯೊಬ್ಬರು ನಮಗೆ ನೆರವು ನೀಡಿದರು. ಆಕೆಯ ನೆರವು ಮತ್ತು ವಾಸಿಮ್ ಅವರ ಶ್ರಮದಿಂದ ಸುರಕ್ಷಾ ಆರೋಗ್ಯಸ್ಥಿತಿ ಚೇತರಿಸಿಕೊಂಡಿದೆ. ಇದು ಸಮಾಜಕ್ಕೆ ಮಾದರಿಯಾಗಬೇಕು. ಹೆಬ್ರಿ ಪೊಲೀಸರು ಕೂಡ ಸೋಮೇಶ್ವರದಿಂದ ಹೆಬ್ರಿಯ ಆಸ್ಪತ್ರೆವರೆಗೆ ‘ಜೀರೋ’ ಟ್ರಾಪಿಕ್ ವ್ಯವಸ್ಥೆ ಮಾಡಿಕೊಟ್ಟರು” ಎಂದು ಚಾಲಕ ತಾರೇಶ್ ಹೇಳಿದ್ದಾರೆ.

“ದೇವರ ರೀತಿಯಲ್ಲಿ ಬಂದು ನನ್ನ ಮಗಳನ್ನು ಕಾಪಾಡಿದ ಸಿಬ್ಬಂದಿಗಳಿಗೆ ನನ್ನ ಮನಪೂರ್ವಕ ಕೃತಜ್ಞತೆ. ಉಸಿರಿರುವವರೆಗೆ ಅವರನ್ನು ನೆನಪಿಸಿಕೊಳ್ಳುತ್ತೇನೆ” ಎಂದು ಸುರಕ್ಷಾ ತಾಯಿ ರೇಖಾ ಹೇಳಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...