ಉಡುಪಿ | ಕಾಲೇಜು ಹಾಸ್ಟೇಲ್ ಗೋಡೆಯಲ್ಲಿ ದೇಶ ವಿರೋಧಿ ಬರಹ, ಪ್ರಕರಣ ದಾಖಲು

Date:

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪ್ರತಿಷ್ಠಿತ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ತಿನಿಯರ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಪ್ರಚೋದನಾಕಾರಿ ಬರಹಗಳನ್ನು ಬರೆದಿರುವ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ವೀಡಿಯೊ ಸಂದೇಶದ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ವಸತಿ ನಿಲಯದ ಶೌಚಾಲಯದ ಒಳಗಡೆ ಒಂದು ಪೆನ್ನನ್ನು ಇಟ್ಟು ಪ್ರಚೋದನಾಕಾರಿ ಹೇಳಿಕೆಗಳನ್ನು ಬರೆದಿರುತ್ತಾರೆ. ಅದು ಹಿಂದೂ ಮತ್ತು ಮುಸ್ಲಿಂ ಧರ್ಮಕ್ಕೆ ಧಕ್ಕೆ ತರುವ ರೀತಿಯಲ್ಲಿ ಬರೆದಿರಲಾಗಿರುತ್ತದೆ. ಈ ಬಗ್ಗೆ ಹಾಸ್ಟೆಲಿನ ಮ್ಯಾನೇಜ‌ರ್ ಅವರು ಪೊಲೀಸರಿಗೆ ಶುಕ್ರವಾರ ಬೆಳಿಗ್ಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಯಾರೋ ಅಪರಿಚಿತ ವಿದ್ಯಾರ್ಥಿಗಳು ಬರೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಇದರ ಬಗ್ಗೆ ಕೂಲಕುಂಶವಾಗಿ ತನಿಖೆ ನಡೆಸಿ ಯಾರು ಇದನ್ನು ಮಾಡಿದ್ದಾರೋ ಅವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...