ಉಡುಪಿ‌ | ಅಕ್ರಮವಾಗಿ ರೆಸಾರ್ಟ್ ನಿರ್ಮಾಣ; ಬಿಜೆಪಿ ಮಾಜಿ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

Date:

ಬಡಾನಿಡಿಯೂರು ಕಡಲ ತೀರದಲ್ಲಿ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅಕ್ರಮವಾಗಿ ರೆಸಾರ್ಟ್ ನಿರ್ಮಾಣಕ್ಕೆ ಹುನ್ನಾರ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಆಗ್ರಹಿಸಿ ಉಡುಪಿಯ ಬಡಾನಿಡಿಯೂರು ಕರಾವಳಿ ಯುವಕ ಮಂಡಲ ಮತ್ತು ಕರಾವಳಿ ಮಹಿಳಾ ಮಂಡಲದ ನೇತೃತ್ವದಲ್ಲಿ ಬಡಾನಿಡಿಯೂರು ಸಮುದ್ರ ತೀರದಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಕರಾವಳಿ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶಿವಾನಂದ ಸುವರ್ಣ ಮಾಧ್ಯಮದೊಂದಿಗೆ ಮಾತನಾಡಿ, “ಬಡಾನಿಡಿಯೂರು ಗ್ರಾಮದ ಸರ್ವೆ ನಂಬರ್ 118ರಲ್ಲಿ ಮಾಜಿ ಶಾಸಕ ಕೆ ರಘುಪತಿ ಭಟ್ ಮತ್ತು ಅವರ ಶ್ರೀನಿವಾಸ ಅಸೋಸಿಯೇಟ್ ಎಂಬ ಸಂಸ್ಥೆ ಅಕ್ರಮವಾಗಿ ರೆಸಾರ್ಟ್ ನಿರ್ಮಿಸಲು ಹುನ್ನಾರ ನಡೆಸುತ್ತಿದೆ. ಇಲ್ಲಿರುವ ಸರ್ಕಾರಿ ಜಾಗದಲ್ಲಿ ಕರಾವಳಿ ಯುವಕ ಮಂಡಲ ಕ್ರೀಡಾಂಗಣ ಹಾಗೂ ಉದ್ಯಾನವನ ನಿರ್ಮಿಸಲು ಮಣ್ಣು ಹಾಕಿದಾಗ ಮಾಜಿ ಶಾಸಕರು ಕರೆ ಮಾಡಿ ಮಣ್ಣು ತೆರವುಗೊಳಿಸುವಂತೆ ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿದರು.

“ಇಲ್ಲಿ ಅಕ್ರಮವಾಗಿ ವಾಣಿಜ್ಯ ಭೂಪರಿವರ್ತನೆ ಮಾಡಲಾಗಿದೆ. ವಾಣಿಜ್ಯ ಭೂಪರಿವರ್ತನೆ ಮಾಡುವಾಗ ಕನಿಷ್ಟ 12 ಮೀಟರ್ ಅಗಲದ ರಸ್ತೆ ಇರಬೇಕೆಂಬ ನಗರಾಭಿವೃದ್ಧಿ ಪ್ರಾಧಿಕಾರದ ನಿಮಯವಿದೆ. ಇಲ್ಲಿ ಇರುವುದು ಕೇವಲ 12 ಅಡಿ ಅಗಲದ ರಸ್ತೆ. ಈ ನಿಯಮವನ್ನು ಗಾಳಿಗೆ ತೂರಿ ಮತ್ತು ಸ್ಥಳೀಯ ಜನರನ್ನು ಕತ್ತಲಿನಲ್ಲಿ ಇಟ್ಟು ವಾಣಿಜ್ಯ ಭೂಪರಿವರ್ತನೆ ಮಾಡಲಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂ. ಗ್ರಾಮಾಂತರ | ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ ಸ್ವಚ್ಛತೆ ಮರೀಚಿಕೆ; ಸ್ಥಳೀಯರು ಹೈರಾಣು

“ಈ ಪ್ರದೇಶದಲ್ಲಿ ತಲತಲಾಂತರದಿಂದ ಸಾಂಪ್ರಾದಾಯಿಕ ಮೀನುಗಾರಿಕೆ ನಡೆಸಲಾಗುತ್ತಿದ್ದು, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಇದು ಸಂಪೂರ್ಣ ವಸತಿ ಪ್ರದೇಶವಾಗಿದೆ. ಇಲ್ಲಿ ಸುಮಾರು 50 ಕೋಟಿ ರೂಪಾಯಿಗೂ ಅಧಿಕ ಬಂಡವಾಳ ಹಾಕಿ ಈ ದೊಡ್ಡ ಯೋಜನೆ ಮಾಡುವ ಮೂಲಕ ಪಾಶ್ಚಿಮಾತ್ಯ ಸಂಸ್ಕೃತಿ ಹೇರುವ ಪ್ರಯತ್ನ ನಡೆಸಲಾಗುತ್ತಿದೆ. ರೆಸಾರ್ಟ್‌ನಲ್ಲಿ ಪಬ್, ಬಾರ್‌ಗಳನ್ನು ನಿರ್ಮಾಣ ಮಾಡಲು ನಿರ್ಧರಿಸಿದ್ದಾರೆ. ಇಂತಹ ಸಂಸ್ಕೃತಿಗೆ ನಾವು ಅವಕಾಶ ನೀಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂರಾರು ಮಂದಿ‌ ಗ್ರಾಮಸ್ಥರು ಸಭೆಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...