ಉಡುಪಿ | ನಾಯಕತ್ವದ ಗುಣವನ್ನು ಪದವಿ ಶಿಕ್ಷಣದಿಂದಲೇ ರೂಢಿಸಿಕೊಳ್ಳಿ: ವಿ.ಜಿ. ಶೆಟ್ಟಿ

Date:

ಮಂಗಳೂರು ವಿಶ್ವವಿದ್ಯಾನಿಲಯ ರೆಡ್‌ಕ್ರಾಸ್ ಘಟಕ ಮತ್ತು ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್‌ಕ್ರಾಸ್ ಘಟಕಗಳು ಅನುಷ್ಠಾನದಲ್ಲಿರುವ ಜಿಲ್ಲೆಯ ಕಾಲೇಜುಗಳ ರೆಡ್‌ಕ್ರಾಸ್ ಘಟಕದ ನಾಯಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ಉಡುಪಿ ನಗರದ ಅಜ್ಜರಕಾಡುವಿನ ರೆಡ್‌ಕ್ರಾಸ್ ಭವನದಲ್ಲಿ ನಡೆಯಿತು.

ರೆಡ್‌ಕ್ರಾಸ್ ರಾಜ್ಯ ಶಾಖೆಯ ಆಡಳಿತ ಮಂಡಳಿ ಸದಸ್ಯ ವಿ.ಜಿ. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಪದವಿ ಶಿಕ್ಷಣದಿಂದಲೇ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್ ಮಾತನಾಡಿ, ಮಾನವ ಸಂಪನ್ಮೂಲದ ಅಭಿವೃದ್ಧಿಯಲ್ಲಿ ತರಬೇತಿ ಕಾರ್ಯಾಗಾರವು ಬಹು ಮುಖ್ಯವಾದುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮಂಜುನಾಥ ಪೈ ಮೆಮೋರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್‌ಕ್ರಾಸ್ ಸಂಯೋಜಕಿ ಡಾ. ದಿವ್ಯಾ ಪ್ರಭು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ರೆಡ್‌ಕ್ರಾಸ್ ಕಾರ್ಯಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಶಿವಮೊಗ್ಗ | ವಿವಿಗಳಲ್ಲಿ ನಡೆಯುವ ಸಂಶೋಧನೆಗಳನ್ನು ರೈತರು ಬಳಸಿಕೊಳ್ಳಬೇಕು: ಬಸವರಾಜಪ್ಪ

ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಘವೇಂದ್ರ ಪ್ರಭು ಕರ್ವಾಲ್ ನಿರೂಪಿಸಿ, ರೆಡ್‌ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...