ಉಡುಪಿ | ಇಂದ್ರಾಳಿಯ ರೈಲ್ವೆ ನಿಲ್ದಾಣದ ಮೇಲ್ಸೇತುವಿಗೆ, ಮೇಲ್ಛಾವಣೆ ಅಳವಡಿಸುವಂತೆ ಆಗ್ರಹ

Date:

ಉಡುಪಿ ಇಂದ್ರಾಳಿ ರೈಲು ನಿಲ್ದಾಣದಲ್ಲಿರುವ ಮೇಲ್ಸೇತುವೆಗೆ ಮೇಲ್ಛಾವಣೆ ವ್ಯವಸ್ಥೆಯಿಲ್ಲದೆ, ಪ್ರಯಾಣಿಕರು ಬಿಸಿಲು ಮತ್ತು ಮಳೆಯಿಂದ ರಕ್ಷಿಸಿಕೊಳ್ಳಲು ಅಸಹಾಯಕ ಪರಿಸ್ಥಿತಿ ಎದುರಾಗಿದೆ. ಜಿಲ್ಲಾಡಳಿತ, ಶಾಸಕರು, ಸಂಸದರು, ರೈಲ್ವೆ ಅಧಿಕಾರಿಗಳು ಸಮಸ್ಯೆಯನ್ನು ಗಮನಿಸಿ, ಮೇಲ್ಸೇತುವೆಗೆ ತುರ್ತಾಗಿ ಮಾಡಿನ ವ್ಯವಸ್ಥೆಗೊಳಿಸುವಂತೆ, ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ಕೆ.‌ ಬಾಲಗಂಗಾಧರ ರಾವ್, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

ದಿನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಇಂದ್ರಾಳಿ ರೈಲು ನಿಲ್ದಾಣದ ಮೇಲ್ಸೇತುವೆಯನ್ನು ಸಂಚರಿಸಲು ಬಳಸುತ್ತಾರೆ. ಸೇತುವೆಗೆ ಮಾಡಿಲ್ಲದೆ ಸುಡು ಬಿಸಿಲಿನಲ್ಲಿ ನಡೆದು ಸಾಗಬೇಕಾಗಿದೆ. ಮಳೆಗಾಲದಲ್ಲಿ ನೆನೆದು ಪೂರ್ಣ ಒದ್ದೆಯಾಗ ಬೇಕಾಗುತ್ತದೆ.‌ ಒಮ್ಮೊಮ್ಮೆ ರೈಲು ನಿಲ್ದಾಣದಲ್ಲಿ ರೈಲಿನ ನಿಲುಗಡೆ ವೆತ್ಯಾಸ ಕಂಡು ಬಂದಾಗ, ನಿಲ್ದಾಣ ನಿಯಂತ್ರಕರ ಸೂಚನೆ ಮೆರೆಗೆ ಪ್ಲಾಟ್ ಫಾರ್ಮ್ ಬದಲಿಸ ಬೇಕಾದ ಅನಿವಾರ್ಯ ಪರಿಸ್ಥಿತಿಯನ್ನು ಪ್ರಯಾಣಿಕರು ಎದುರಿಸಬೇಕಾಗುತ್ತದೆ. ಆಯಾಯ ಕಾಲಮಾನದಲ್ಲಿ ಪ್ರಕಟವಾಗುವ ಮಳೆ, ಬಿಸಿಲಿನಲ್ಲಿಯೇ ಪ್ರಯಾಣಿಕರು ಸೇತುವೆಯಲ್ಲಿ ಸಾಗಬೇಕಾಗುತ್ತದೆ. ಚಿಕ್ಕ ಮಕ್ಕಳನ್ನು ಹೊತ್ತು ಸಾಗುವ ಮಾತೆಯರ, ಮತ್ತು ಕುಂಟುತ್ತ ನಡೆದು ಸಾಗುವ ಹಿರಿಯ ನಾಗರಿಕರ ಪರಿಸ್ಥಿತಿ ಅಯ್ಯೋಮಯ ಅನಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...