ಉಡುಪಿ | ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

Date:

ಇನ್‌ಸ್ಟಾಗ್ರಾಂ ಖಾತೆಗೆ ಬಂದ ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ ಯುವತಿಯೋರ್ವಳು 12.46 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ನಡೆದಿದೆ.

ಶಿವಳ್ಳಿ ಗ್ರಾಮದ ಸಪ್ನಾ (28) ವಂಚನೆಗೆ ಒಳಗಾದವರು. ಅವರ ಇನ್‌ಸ್ಟಾಗ್ರಾಂ ಖಾತೆಗೆ ವರ್ಕ್ ಫ್ರಮ್ ಹೋಮ್ ಎಂದು ಲಿಂಕ್ ಬಂದಿದ್ದು, ಅದನ್ನವರು ಓಪನ್ ಮಾಡಿದ್ದಾರೆ. ಅದರಲ್ಲಿ ಆರಂಭದಲ್ಲಿ 200 ರೂ. ಹೂಡಿಕೆ ಮಾಡಲು ಹೇಳಿದ್ದರು. ಅದಕ್ಕೆ 50 ರೂ. ಕಮಿಷನ್ ದೊರಕಿದೆ. ಇದನ್ನು ನಂಬಿದ ಯುವತಿ ಹೆಚ್ಚಿನ ಕಮಿಷನ್ ಬರುವುದಾಗಿ ನಂಬಿ ಡಿಸೆಂಬರ್ 9ರಿಂದ ಡಿಸೆಂಬರ್ 28ರ ನಡುವಿನ ಅವಧಿಯಲ್ಲಿ ಅಪರಿಚಿತರು ತಿಳಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಫೋನ್ ಪೇ, ಪೇಟಿಎಂ ಹಾಗೂ ಕ್ಯಾಶ್ ಡೆಪಾಸಿಟ್ ಮೂಲಕ ಒಟ್ಟು 12.46 ಲಕ್ಷ ರೂ. ಹಣವನ್ನು ಹೂಡಿಕೆ ಮಾಡಿದ್ದು, ಹಣ ವಾಪಸ್ ಸಿಗದೆ ಮೋಸ ಹೋಗಿದ್ದಾರೆ.

ಈ ಬಗ್ಗೆ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...