ಉಡುಪಿ | ಪಿಎಸ್‌ಐ ನಾಸೀರ್ ಹುಸೇನ್ ನಿಧನಕ್ಕೆ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಸಂತಾಪ

Date:

ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ಅವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಸಂತಾಪ ವ್ಯಕ್ತಪಡಿಸಿದೆ.

ಕರ್ತವ್ಯ ನಿರ್ವಹಣೆಯಲ್ಲಿಯೇ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಅವರು ನಿಧನರಾಗಿರುವುದು ಅತ್ಯಂತ ದುಃಖಕರ ಸಂಗತಿ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಬಳಿಕ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಅವರು ಜನಸ್ನೇಹಿ, ಕರ್ತವ್ಯನಿಷ್ಠ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಅವರ ಸೇವೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಮಾಧ್ಯಮ ವಕ್ತಾರ ಇಕ್ಬಾಲ್ ಮನ್ನಾ ಹೇಳಿದ್ದಾರೆ.

ಅವರ ಅಗಲಿಕೆ ಪೊಲೀಸ್ ಇಲಾಖೆಗೆ ಮಾತ್ರವಲ್ಲ, ಸಮಾಜಕ್ಕೂ ತುಂಬಲಾರದ ನಷ್ಟವಾಗಿದೆ. ಸರ್ವಶಕ್ತನಾದ ದೇವನು ಮೃತರಿಗೆ ಸ್ವರ್ಗವನ್ನು ದಯಪಲಿಸಲಿ ಹಾಗೂ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...