ಉಡುಪಿ | ಮುಸ್ಲಿಮ್ ಒಕ್ಕೂಟದ 25ನೇ ವರ್ಷದ ವಾರ್ತಾ ಸಂಚಯ ಬಿಡುಗಡೆ

Date:

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಇಂದು ಉಡುಪಿಯ ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಗಣ್ಯರ ಸಮಾವೇಶ ಮತ್ತು ಒಕ್ಕೂಟದ 25ನೇ ವರ್ಷದ ವಿಶೇಷ ವಾರ್ತಾ ಸಂಚಯ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝೀ ಮೌಲಾನಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಇವರು ವಾರ್ತಾ ಸಂಚಯ ಬಿಡುಗಡೆ ಮಾಡಿ, ಪ್ರಾರ್ಥನೆ ಸಲ್ಲಿಸಿದರು.

1005132458

ಮುಖ್ಯ ಅತಿಥಿಯಾಗಿ ಆಗಮಿಸಿದ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹ್ಮದ್ ಮಾತನಾಡಿ ಮುಸ್ಲಿಮ್ ಸಮುದಾಯ ಶಿಕ್ಷಣದಿಂದ ಬಹಳಷ್ಟು ವಂಚಿತರಾಗಿದ್ದಾರೆ.‌ ಇತ್ತೀಚಿನ ದಿನಗಳಲ್ಲಿ ಶಿಕ್ಷಣದ ಮಹತ್ವ ಅರಿತು, ಜಾಗೃತರಾಗಿದ್ದರೂ ಸಹ ಉತ್ತರ ಭಾರತದಂತಹ ರಾಜ್ಯಗಳಲ್ಲಿ ಇಂದು ಸಹ ಬಹಳಷ್ಟು ಜನ ಶಿಕ್ಷಣದಿಂದ ವಂಚಿತರಾಗಿದ್ದಾರೆ, ಇಸ್ಲಾಮ್ ಧರ್ಮ, ಪ್ರವಾದಿ ವಚನಗಳು ಶಿಕ್ಷಣಕ್ಕೆ ಬಹಳ ಮಹತ್ವವನ್ನು ಕೊಟ್ಟಿದೆ ಆದರೆ ಅದನ್ನು ಅರಿಯುವಲ್ಲಿ ನಾವು ವಿಫಲರಾಗಿದ್ದೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1005132457

ಈ ಸಂದರ್ಭದಲ್ಲಿ ಪ್ರಾಥಮಿಕ ಹಂತದಲ್ಲಿ ಪವಿತ್ರ ಕುರ್‌ಆನ್ ಸಂಪೂರ್ಣ ಕಂಠಪಾಠ ಮಾಡಿದ ಯುವ ಹಾಫೀಝ್ಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಮೊಹಮ್ಮದ್ ಮೌಲಾ ವಹಿಸಿದ್ದರು.
ಒಕ್ಕೂಟದ ಮಾಜಿ ಅಧ್ಯಕ್ಷರಾದ ಯಾಸೀನ್ ಮಲ್ಪೆ ಒಕ್ಕೂಟ ಇಪ್ಪತ್ತೈದು ವರ್ಷಗಳ ನಡೆದು ಬಂದ ಹಾದಿಯನ್ನು ತಿಳಿಸಿದರು. ವಾರ್ತಾ ಸಂಚಯದ ಸಂಪಾದಕರಾದ ಮೌಲಾನ ಝಮೀರ್ ಅಹ್ಮದ್ ರಶಾದಿಯವರು ಪುಸ್ತಕದ ಪರಿಚಯ ಮಾಡಿದರು. ಇದ್ರೀಸ್ ಹೂಡೆ ಪ್ರಾಸ್ತಾವಿಕವಾಗಿ ಮಾತನಾಡಿದರು.

1005132461

ವೇದಿಕೆಯಲ್ಲಿ ಮೂಳುರಿನ ಅಲ್ ಇಹ್ಸಾನ್ ವಸತಿ ಶಾಲೆಯ ವ್ಯವಸ್ಥಾಪಕರಾದ ಮೌಲಾನ ಮುಸ್ತಫಾ ಸಆದಿ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಹಿರಿಯ ಜಿಲ್ಲಾ ಉಪಾಧ್ಯಕ್ಷರಾದ ಮೊಹಮ್ಮದ್ ರಫೀಕ್ ಬಿ.ಎಸ್.ಎಫ್, ಉಡುಪಿ ತಾಲೂಕು ಅಧ್ಯಕ್ಷರಾದ ಎಸ್.ಎಮ್. ಇರ್ಶಾದ್ ನೇಜಾರು, ಕುಂದಾಪುರ ತಾಲ್ಲೂಕು ಅಧ್ಯಕ್ಷರಾದ ಎಸ್. ದಸ್ತಗೀರ್ ಕಂಡ್ಲರು, ಕಾರ್ಕಳ ತಾಲೂಕು ಅಧ್ಯಕ್ಷರಾದ ಮುಹಮ್ಮದ್ ಗೌಸ್ ಮಿಯಾರು, ಕಾಪು ತಾಲೂಕು ಅಧ್ಯಕ್ಷರಾದ ನಸೀರ್ ಅಹ್ಮದ್, ಬ್ರಹ್ಮಾವರ ತಾಲೂಕು ಅಧ್ಯಕ್ಷರಾದ ತಾಜುದ್ದೀನ್ ಇಬ್ರಾಹಿಮ್, ಒಕ್ಕೂಟದ ಮಾಜಿ ಅಧ್ಯಕ್ಷರಾದ ಕೋಟ ಇಬ್ರಾಹಿಂ ಸಾಹೇಬ್, ಎಂ ಪಿ ಮೊಹಿದ್ದೀನ್, ಅಶ್ಫಾಕ್ ಕಾರ್ಕಳ, ಹಾಜಿ ಅಬುಬಕ್ಕರ್ ನೇಜಾರ್, ಹಾಜಿ ತೌಫೀಕ್ ಅಬ್ದುಲ್ಲಾ ನಾವುಂದ ಉಪಸ್ಥಿತರಿದ್ದರು.ಉಡುಪಿ ಜಿಲ್ಲಾ ಮುಸ್ಲೀಮ್ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಕಟಪಾಡಿ ಸ್ವಾಗತಿಸಿದರು. ಜಫ್ರುಲ್ಲಾ ನೇಜಾರ್ ಧನ್ಯವಾದವಿತ್ತರು. ಯಾಸೀನ್ ಕೋಡಿಬೆಂಗ್ರೆ, ಜಿ ಎಂ ಶರೀಫ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...