ಉಡುಪಿ | ವಿಮಾನಯಾನ ಕ್ಷೇತ್ರದಲ್ಲಿ ಸುರಕ್ಷತೆ ಮುಂಚೂಣಿಯ ಆದ್ಯತೆಯಾಗಲಿ – ಜಿಲ್ಲಾ ಮುಸ್ಲಿಂ ಒಕ್ಕೂಟ

Date:

ನಿನ್ನೆ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತವು ಇಡೀ ರಾಷ್ಟ್ರದ ಮನಸ್ಸಿಗೆ ಆಘಾತ ನೀಡಿದ ದುರಂತ. ಅನೇಕ ಅಮೂಲ್ಯ ಜೀವಗಳ ನಷ್ಟದಿಂದ ಕೂಡಿದ ಈ ಅಪಾಯದಲ್ಲಿ ಪ್ರಾಣ ಕಳೆದುಕೊಂಡ ಪ್ರಯಾಣಿಕರ ಆತ್ಮಕ್ಕೆ ಶಾಂತಿ ಲಭಿಸಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲೆಂದು ನಾವು ಪ್ರಾರ್ಥಿಸುತ್ತೇವೆ ಎಂದು ಉಡುಪಿ ಜಿಲ್ಲಾ ‌ಮುಸ್ಲೀಮ್ ಒಕ್ಕೂಟದ ಅಧ್ಯಕ್ಷರಾದ ಮಹಮ್ಮದ್ ಮೌಲಾ‌ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂತಹ ಆಪತ್ತುಗಳು ಅನೇಕ ಕುಟುಂಬಗಳನ್ನು ಒಂದೇ ಕ್ಷಣದಲ್ಲಿ ಅಂಧಕಾರಕ್ಕೆ ತಳ್ಳುತ್ತವೆ. ಆ ಕುಟುಂಬಗಳ ನೋವನ್ನು ಮರೆಯುವಷ್ಟು ಸುಲಭವಲ್ಲ. ಗಾಯಗೊಂಡವರಿಗೂ ಶೀಘ್ರ ಗುಣಮುಖ ಆಗಲಿ ಎಂದು ಪ್ರಾರ್ಥಿಸುತ್ತೇವೆ. ಈ ಅಪಘಾತದ ಸತ್ಯ ಅನಾವರಣಗೊಳ್ಳಬೇಕೆಂಬುದು ನಮ್ಮ ಸ್ಪಷ್ಟ ನಿಲುವು. ವಿಮಾನಯಾನ ಕ್ಷೇತ್ರದಲ್ಲಿ ಸುರಕ್ಷತೆ ಮುಂಚೂಣಿಯ ಆದ್ಯತೆ ಆಗಬೇಕು. ಇಂತಹ ದುರ್ಘಟನೆಗಳು ಪುನರಾವೃತ್ತವಾಗದಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...