ಉಡುಪಿ ಕಂಬಳ ಶಂಕುಸ್ಥಾಪನೆ: ರಾಜಕೀಯ ಕಚ್ಚಾಟದ ಮಧ್ಯೆಯೇ ಶಾಂತಿಯುತವಾಗಿ ನೆರವೇರಿದ ಕಾರ್ಯಕ್ರಮ

Date:

ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಕಚ್ಚಾಟದ ನಡುವೆಯೇ ಮಣಿಪಾಲ ಸಮೀಪದ 80 ಬಡಗುಬೆಟ್ಟುವಿನಲ್ಲಿರುವ ಕಂಬಳದ ಕರೆಯಲ್ಲಿ ಉಡುಪಿ ಕಂಬಳದ ಶಂಕುಸ್ಥಾಪನೆ ಕಾರ್ಯಕ್ರಮ ಇಂದು ಶಾಂತಿಯುತವಾಗಿ ನೆರವೇರಿತು.

ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ ಶೆಟ್ಟಿ ಅವರ ನೇತೃತ್ವದಲ್ಲಿ ಉಭಯ ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ಶಂಕುಸ್ಥಾಪನೆ ಹಾಗೂ ಕಂಬಳದ ಪೋಸ್ಟರ್ ಅನಾವರಣ ಸಮಾರಂಭ ಜರುಗಿತು. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದೆ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಂಡಿತು.

ಇದಕ್ಕೂ ಮುನ್ನ ಶಂಕುಸ್ಥಾಪನೆ ವಿಚಾರವಾಗಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್‌ನ ಮಾಜಿ ಸಚಿವ ವಿನಯಕುಮಾರ ಸೊರಕೆ ಅವರು ಶಂಕುಸ್ಥಾಪನೆಗೆ ಆಕ್ಷೇಪ ವ್ಯಕ್ತಪಡಿಸಿ, ಮಾರ್ಚ್ 4ರಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಸಬೇಕು ಎಂದು ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ನಿಷೇಧಾಜ್ಞೆ ಹೇರಿದ ಹಿನ್ನೆಲೆ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಆದಾಗ್ಯೂ ಜಿಲ್ಲಾಡಳಿತದ ಆದೇಶಗಳ ನಡುವೆಯೇ ಯಾವುದೇ ಸದ್ದು-ಗದ್ದಲವಿಲ್ಲದೆ, ಶಾಂತಿಯುತವಾಗಿ ಶಂಕುಸ್ಥಾಪನೆ ನೆರವೇರಿದುದು ಗಮನಾರ್ಹವಾಗಿದೆ.

ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣದಲ್ಲಿ ಇಡಲಾಗಿತ್ತು. ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಪರಂಪರೆಯ ಕಂಬಳ ಉತ್ಸವಕ್ಕೆ ಚಾಲನೆ ದೊರೆತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...