ಉಡುಪಿ ಕಂಬಳ ವಿವಾದ | ರಾಜಕೀಯ ಲಾಬಿಗೆ ಬಲಿಯಾಗುತ್ತಿದೆಯೇ ಜಾನಪದ ಕ್ರೀಡೆ ?

Date:

ಉಡುಪಿ ಜಿಲ್ಲೆಯ 80 ಬಡಗುಬೆಟ್ಟು ಗ್ರಾಮದ ಸರ್ವೆ ನಂ. 11/1ರಲ್ಲಿ 6.30 ಎಕರೆ ಸರಕಾರಿ ಭೂಮಿಯನ್ನು ಉಡುಪಿ ಕಂಬಳ ಆಯೋಜನೆಗಾಗಿ ಕಾಯ್ದಿರಿಸಿರುವ ವಿಚಾರ ಇದೀಗ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ. ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ನಡುವೆ ಆರೋಪ–ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ಕಂಬಳ ವಿಷಯ ರಾಜಕೀಯ ಸಂಘರ್ಷದ ಕೇಂದ್ರಬಿಂದುವಾಗಿದೆ.

1009861987

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ಕಾಪು ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸಿ ಸಣ್ಣತನದ ರಾಜಕಾರಣ ಮಾಡುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ,” ಎಂದು ಎಚ್ಚರಿಸಿದ್ದಾರೆ.

ಇದುವರೆಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಂಪೂರ್ಣ ಬೆಂಬಲ ನೀಡಿ ಸೌಹಾರ್ದ ರಾಜಕೀಯ ನಡೆಸಿದ್ದೇವೆ. ಆದರೆ ಇದೇ ರೀತಿ ಸಂಘರ್ಷ ರಾಜಕೀಯ ಮುಂದುವರಿದರೆ ಕಪ್ಪು ಬಾವುಟ ಪ್ರದರ್ಶನ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1009861993

ಶಾಸಕರ ಪ್ರಕಾರ, ಆರು ತಿಂಗಳ ಹಿಂದೆ ಎಸಿ, ಡಿಸಿ ಸಹಿತ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಗಡಿ ಗುರುತು ಮಾಡಿ 6.30 ಎಕರೆ ಭೂಮಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸರ್ಕಾರವೇ ಮಂಜೂರು ಮಾಡಿದೆ. ಪಕ್ಷಾತೀತವಾಗಿ ಕಂಬಳ ಸಮಿತಿ ರಚಿಸಿ ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ಒಪ್ಪಿಗೆ ಪಡೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

1009861986

“ಭೂಮಿ ಹಸ್ತಾಂತರವೇ ಆಗಿಲ್ಲ” — ಸೊರಕೆ ಪ್ರತಿಕ್ರಿಯೆ

ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರು ಈ ಆರೋಪಗಳನ್ನು ತಳ್ಳಿ ಹಾಕಿ, “ಜಿಲ್ಲಾಡಳಿತ ಉದ್ದೇಶಿತ ಉಡುಪಿ ಕಂಬಳಕ್ಕಾಗಿ 6.30 ಎಕರೆ ಭೂಮಿಯನ್ನು ಯಾವುದೇ ಕಂಬಳ ಸಮಿತಿಗೆ ಹಸ್ತಾಂತರಿಸಿಲ್ಲ. ಫೆ.28ರಂದು ನಡೆದ ಭೂಮಿ ಪೂಜೆ ಕಾನೂನು ಬಾಹಿರ” ಎಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ.

1009861988

“ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಯಾವುದೇ ಅಧಿಕೃತ ಕಂಬಳ ಸಮಿತಿ ರಚನೆಯಾಗಿಲ್ಲ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಶಾಸಕರ ನೇತೃತ್ವದಲ್ಲಿ ಶಂಕುಸ್ಥಾಪನೆ ನಡೆಸಲಾಗಿದೆ,” ಎಂದು ಆರೋಪಿಸಿದ್ದಾರೆ.

2025ರ ಸೆ.22ರಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಸರಿಗೆ ಷರತ್ತುಗಳೊಂದಿಗೆ ಭೂಮಿ ಕಾಯ್ದಿರಿಸಲಾಗಿದೆ. ಆದರೆ ಸಮಿತಿಗೆ ಹಸ್ತಾಂತರಿಸಿಲ್ಲ. ಅಲ್ಲದೆ ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಮರಮಟ್ಟುಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿರುವ ಕುರಿತು ಪ್ರಕರಣವೂ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.

6.30 ಎಕರೆ ಬದಲು ಸುಮಾರು 13 ಎಕರೆ ಪ್ರದೇಶದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಈ ಪ್ರದೇಶದಲ್ಲಿ ಸುಮಾರು 40 ವರ್ಷಗಳಿಂದ 10 ಕೃಷಿಕ ಕುಟುಂಬಗಳು ತೋಟಗಾರಿಕೆ ನಡೆಸುತ್ತಿದ್ದು, 1993ರಲ್ಲಿ ಅವರಿಗೆ ಮಂಜೂರಾದ ಜಾಗವಿದು ಎಂದು ಅವರು ತಿಳಿಸಿದ್ದಾರೆ.

1009861870

“ಬಡವರಿಗೆ ಭೂಮಿ ಕೊಡಿ, ಕಂಬಳಕ್ಕಲ್ಲ” — ದಸಂಸ ಆಕ್ರೋಶ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಮತ್ತು ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸಾವಿರಾರು ಬಡವರು ಸ್ವಂತ ನಿವೇಶನವಿಲ್ಲದೇ ಸಂಕಷ್ಟದಲ್ಲಿರುವಾಗ 6.30 ಎಕರೆ ಸರಕಾರಿ ಭೂಮಿಯನ್ನು ಕಂಬಳಕ್ಕೆ ಕಾಯ್ದಿರಿಸಿರುವುದು ಜನವಿರೋಧಿ ನಡೆ ಎಂದು ಅವರು ಆರೋಪಿಸಿದ್ದಾರೆ.

“ಕಂಬಳ ಕೆಲವೊಂದು ಕುಟುಂಬಗಳ ಆಚರಣೆ. ಅದು ಜಿಲ್ಲೆಯ ಮೂಲಭೂತ ಅವಶ್ಯಕತೆ ಅಲ್ಲ. ಬಡವರಿಗೆ 5 ಸೆಂಟ್ಸ್ ಭೂಮಿ ಕೊಡಲು ಭೂಮಿ ಇಲ್ಲವೆಂದು ಹೇಳುವ ಆಡಳಿತ ಈಗ ಕಂಬಳಕ್ಕಾಗಿ ಭೂಮಿ ಕಾಯ್ದಿರಿಸಿರುವುದು ವಿರೋಧಾಭಾಸ,” ಎಂದು ಅವರು ಪ್ರಶ್ನಿಸಿದ್ದಾರೆ.

ಜಿಲ್ಲಾಡಳಿತ ರಾಜಕಾರಣಿಗಳ ಒತ್ತಡಕ್ಕೆ ಮಣಿಯದೆ ಮೊದಲು ಬಡವರಿಗೆ ನಿವೇಶನ ಮಂಜೂರು ಮಾಡಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.

1009861733
Mangalore, Karnataka, India – December 30th 2023 – Photo captured in Kambala or Buffalo race, Traditional cultural sport of southern India, A Local Jockey running along his buffalo.

ಜಾನಪದ ಕ್ರೀಡೆನಾ? ರಾಜಕೀಯ ವೇದಿಕೆಯಾ?

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀ ವರ್ಷ ಅನೇಕ ಕಂಬಳಗಳು ನಡೆಯುತ್ತವೆ. ಗ್ರಾಮೀಣ ಜಾನಪದ ಕ್ರೀಡೆಯಾಗಿ ಗುರುತಿಸಿಕೊಂಡಿರುವ ಕಂಬಳ ಇದೀಗ ರಾಜಕೀಯ ಪ್ರತಿಷ್ಠೆಯ ವೇದಿಕೆಯಾಗಿದೆ ಎಂಬ ಟೀಕೆ ಕೇಳಿಬರುತ್ತಿದೆ.

ಒಂದೆಡೆ ಕಂಬಳವನ್ನು ಜಿಲ್ಲಾಡಳಿತದ ಕಾರ್ಯಕ್ರಮವನ್ನಾಗಿ ನಡೆಸಬೇಕು ಎಂಬ ಆಗ್ರಹ; ಮತ್ತೊಂದೆಡೆ ಬಡವರ ಭೂಮಿ ಹಕ್ಕು, ಕೃಷಿಕರ ಜೀವನೋಪಾಯ, ಪರಿಸರ ಹಾನಿ ಎಂಬ ಪ್ರಶ್ನೆಗಳು ಮುಂದಿಡಲ್ಪಡುತ್ತಿವೆ.

ಜಿಲ್ಲಾಡಳಿತದ ಅಂತಿಮ ನಿರ್ಧಾರವೇ ವಿವಾದಕ್ಕೆ ತೆರೆ ಎಳೆಯುವ ಸಾಧ್ಯತೆ ಇದೆ. ಭೂಮಿ ಹಸ್ತಾಂತರ ಪ್ರಕ್ರಿಯೆ, ಷರತ್ತುಗಳ ಅನುಸರಣೆ ಹಾಗೂ ಕಾನೂನು ಪ್ರಕ್ರಿಯೆಗಳ ಕುರಿತು ಸ್ಪಷ್ಟತೆ ಬಂದ ಬಳಿಕವೇ ಉಡುಪಿ ಕಂಬಳದ ಭವಿಷ್ಯ ನಿರ್ಧಾರವಾಗಲಿದೆ.

ಇದೀಗ ಕಂಬಳ ವಿಷಯ ಕೇವಲ ಕ್ರೀಡೆಗೆ ಸೀಮಿತವಾಗದೆ, ಕಾಪು ಕ್ಷೇತ್ರದ ರಾಜಕೀಯ ಪ್ರತಿಷ್ಠೆಯ ಪ್ರಶ್ನೆಯಾಗಿ ರೂಪಾಂತರಗೊಂಡಿರುವುದು ಸ್ಪಷ್ಟವಾಗಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...