ಉಡುಪಿ | ಕೋಡಿ-ಬೆಂಗ್ರೇ ಹಂಗಾರಕಟ್ಟೆ ಬಾರ್ಜ್ ಲೋಕಾರ್ಪಣೆ

Date:

ಸುಮಾರು 2,05,78,040 ರೂ ವೆಚ್ಚದಲ್ಲಿ ಕೋಡಿ- ಬೆಂಗ್ರೇ ಹಂಗಾರಕಟ್ಟೆ ನದಿಯ ನಡುವೆ ಸಂಪರ್ಕ ಕಲ್ಪಿಸುವ ಮದ್ಯಮ ಗಾತ್ರದ ಹೊಸ ಬಾರ್ಜ್ ಕಾವೇರಿ ಅನ್ನು ಲೋಕಾರ್ಪಣೆ ಗೊಳಿಸಲಾಯಿತು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಾಂಕಾಳ ವೈದ್ಯ ಬಾರ್ಜ್ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ಕೋಡಿ ಬೆಂಗೆಯಿಂದ ಹಂಗಾರಕಟ್ಟೆಗೆ ಸ್ಥಳೀಯ ಜನರು ಹಾಗೂ ಪ್ರವಾಸಕ್ಕೆಂದು ಆಗಮಿಸಿರುವ ಪ್ರಾವಸಿಗರಿಗೂ ಸಹ ಕಡಿಮೆ ಅವಧಿಯಲ್ಲಿ ಪ್ರಯಾಣ ಬೆಳಸಲು ಅನುಕೂಲವಾಗಲಿದೆ. ಬಾರ್ಜ್ ಇಲ್ಲದಿದ್ದಲ್ಲಿ ರಸ್ತೆ ಮೂಲಕ ಸುತ್ತುವರಿದು ಹೋಗಬೇಕಿತ್ತು ಎಂದ ಅವರು ಮುಂದಿನ ದಿನಗಳಲ್ಲಿ ಸ್ಥಳೀಯ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು.

DSC01164 2

ಹಂಗಾರಕಟ್ಟೆ ಬಂದರಿನಲ್ಲಿ ಮೀನುಗಾರಿಕಾ ಪೂರಕ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಬಂದರಿನ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಹಾಗೂ ಇದರ ಜೊತೆಯಲ್ಲಿ ಹೂಳೆತ್ತುವ ಕಾರ್ಯವನ್ನು ಮಾಡಲಾಗುವುದು ಎಂದ ಅವರು, ಶೆಡ್ ನ ನಿರ್ಮಾಣದ ಕಾಮಗಾರಿಯನ್ನು 50ಲಕ್ಷ ರೂ ಗಳಲ್ಲಿ ಕೈಗೊಳ್ಳಲು ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ ಇದನ್ನು ಉನ್ನತೀಕರಣಗೊಳಿಸುವುದರೊಂದಿಗೆ ಅಭಿವೃದಿ ಪಡಿಸಬೇಕು. ಸರ್ಕಾರದ ಮಟ್ಟದಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಡಿ-ಬೆಂಗ್ರೆ ಗ್ರಾಮವು ಈಗಾಗಲೇ ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ. ಸ್ಥಳೀಯ ಜನರು ವ್ಯಸನ ಮುಕ್ತವಾಗಿರುವುದು ಒಂದು ಉತ್ತಮ ಕಾರ್ಯವಾಗಿದ್ದು ಇದರಿಂದ ಜನರ ಆರೋಗ್ಯ ಹೆಚ್ಚಿನ ಸುಧಾರಣೆ ಸಾಧ್ಯವಾಗುತ್ತದೆ. ಇದರಿಂದ ಮುಂದುವರಿಸಿಕೊಂಡು ಹೋಗಬೇಕು ಎಂದರು. ಕಾರ್ಯಕ್ರಮದಲ್ಲಿ ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕ ವಿವೇಕ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕುಸುಮ, ಮುಖಂಡರುಗಳಾದ
ದಿನೇಶ್ ಹೆಗ್ಡೆ, ರಾಜು ಬಂಗೇರ, ಪ್ರಸಾದ್ ಪಿಂಗಳಾಯ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...