ಉಡುಪಿ | ಗಣಿಗಾರಿಕೆ ವಿಷಯದಲ್ಲಿ ಕೊರಗರ ಮೇಲೆ ದೌರ್ಜನ್ಯ ಆರೋಪ, ಬ್ರಹ್ಮಾವರ ತಹಶಿಲ್ದಾರ್ ಕಚೇರಿ ಎದುರು ಪ್ರತಿಭಟನೆ

Date:

ಕೊರಗ ಕುಟುಂಬಗಳು ಹಲವು ದಶಕದಿಂದ ನಡೆಸಿಕೊಂಡು ಬಂದ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆಯನ್ನು ಅನ್ಯರು‌ ಕಬಳಿಸಲು ಪ್ರಯತ್ನಿಸುತ್ತಿದ್ದು ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ,‌ ಗರಿಕೆಮಠ, ಅಚ್ಲಾಡಿಯ ಕೊರಗ ಕುಟುಂಬಗಳು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಸಹಕಾರದಲ್ಲಿ ಬ್ರಹ್ಮಾವರ ತಹಶಿಲ್ದಾರ್ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು.

1008559305

ಈ‌ ಸಂದರ್ಭ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಸುಜಾತ ಮಾತನಾಡಿ, ಉಡುಪಿ ಜಿಲ್ಲೆಯ ಯಡ್ತಾಡಿ ಗ್ರಾಮದ ಸರ್ವೆ ನಂಬರ್ 145 ರಲ್ಲಿ 1.84 ಎಕ್ರೆ ಜಾಗದಲ್ಲಿ ಪರಿಶಿಷ್ಠ ಪಂಗಡದ ರಮಣಿ, ನರ್ಸಿ, ಐತ, ಚಂದ್ರ,ಭಾಸ್ಕ ಅವರು ಪಾರಂಪರಿಕವಾಗಿ ಕಟ್ಟಡ ಕಲ್ಲು ಗಣಿಗಾರಿಕೆ ಮಾಡಿಕೊಂಡು ಬಂದಿದ್ದಾರೆ. ಅಲ್ಲದೆ ಸದ್ರಿ ಜಾಗದಲ್ಲಿ ಮನೆಯನ್ನು ಕಟ್ಟಿಕೊಂಡು ವಾಸವಾಗಿದ್ದಾರೆ. ಆದರೆ ಇದೀಗ ಈ ಜಾಗದಲ್ಲಿ ಕಟ್ಟಡಕಲ್ಲು ಎತ್ತೆಚ್ಚವಾಗಿ ಸಿಗುವುದ್ದರಿಂದ ಸ್ಥಳೀಯ ಒಂದಷ್ಟು ಮಂದಿ ರಾಜಕೀಯ ಪ್ರಭಾವ ಬಳಸಿ ಆ ಜಾಗವನ್ನು ತಮ್ಮದಾಗಿಸಲು ಪ್ರಯತ್ನ ಮಾಡುತ್ತಿದ್ದಾರೆ ಹಾಗೂ ಸರಕಾರಕ್ಕೆ ಕಲ್ಲು ಕೋರೆಯ ಪರವಾನಿಗೆ ಅರ್ಜಿಯನ್ನು ಸಲ್ಲಿಸುತ್ತಾರೆ. ಹೀಗಾಗಿ ಇವರಿಗೆ ಈ ಜಾಗದಲ್ಲಿ ಕಲ್ಲು ಗಣಿಗಾರಿಕೆ ಮಾಡಲು ಅವಕಾಶ ಮಾಡಿಕೊಟ್ಟರೆ ಮೂಲ ನಿವಾಸಿಗಳಾದ ನಮಗೆ ಅನ್ಯಾಯವಾಗುತ್ತದೆ. ಜಿಲ್ಲಾಧಿಕಾರಿ ಯಾವುದೇ ಕಾರಣಕ್ಕೂ ಅವರಿಗೆ ಕಲ್ಲು ಗಣಿಗಾರಿಕೆ ಮಾಡಲು ಅವಕಾಶ ನೀಡಬಾರದು ಎಂದರು.

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ ಮಾತನಾಡಿ, ಕೊರಗ ಸಮಾಜದ ಮೇಲೆ ಬಲಾಢ್ಯರು, ರಾಜಕೀಯ ಪ್ರಾಬಲ್ಯರಿಂದ‌ ನಿರಂತರ ದಾಳಿ, ದೌರ್ಜನ್ಯ ನಡೆಯುತ್ತಿದೆ. ಅದರ ಮುಂದುವರಿದ ಭಾಗ ಎನ್ನುವಂತೆ ಇದೀಗ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆ ಕಾರ್ಮಿಕರನ್ನ ಒಕ್ಕಲೆಬ್ಬುವ‌ಹುನ್ನಾರ ಗರಿಕೆಮಠದಲ್ಲಿ ನಡೆಯುತ್ತಿದೆ. ಪ್ರಭಾವಗಳಿಗೆ ಮಣಿದು ಕೊರಗ ಕುಟುಂಬ ಹೊರತುಪಡಿಸಿ ಇತರರಿಗೆ ಪರವಾನಿಗೆ ನೀಡಿದಲ್ಲಿ ಅಮರಣಾಂತ ಉಪವಾಸ ನಡೆಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಸುದರ್ಶನ್ ಭೇಟಿ ನೀಡಿ ಮಾತುಕತೆ ನಡೆಸಿದರು.

ಈ ಸಂದರ್ಭ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕಾರ್ಯದರ್ಶಿ ಸುಜಾತ ಹಾಗೂ ಕೊರಗ ಸಮಾಜದ ಪ್ರಮುಖರಾದ ಬೋಗ್ರ ಕೊಕ್ಕರ್ಣೆ, ಶೀನ ಕೊರಗ ಇನ್ನಾ, ದಿವಾಕರ ಕಳ್ತೂರು, ವೆಂಕಟೇಶ ಮಧುವನ, ಸಂತ್ರಸ್ತರಾದ ರಮಣಿ, ಚಂದ್ರ, ನರ್ಸಿ, ಮಂಜುಳ ಮತ್ತಿತ್ತರ ಉಪಸ್ಥಿತರಿದ್ದರು.

1008559152

ಗಣಿಗಾರಿಕೆ ಇಲಾಖೆ ಅಧಿಕಾರಿ ಭೇಟಿ; ಮನವೊಲಿಕೆ:-
ಪ್ರತಿಭಟನಾ ಸ್ಥಳಕ್ಕೆ ಉಡುಪಿ ಇಲಾಖೆಯ ಅಧಿಕಾರಿ ಹಾಜೀರ ಭೇಟಿ ನೀಡಿ ಮಾತುಕತೆ ನಡೆಸಿದರು. ನೀವು ನೀಡಿರುವ ಆಕ್ಷೇಪಣೆ ಕುರಿತು ಈಗಾಗಲೇ ತಹಶಿಲ್ದಾರರ ಮೂಲಕ ವರದಿ ಪಡೆದಿದ್ದು ನಿಮ್ಮ ಹೇಳಿಕೆ ದಾಖಲಿಸಲಾಗಿದೆ ಹಾಗೂ ವಸ್ತುಸ್ಥಿತಿ ಬಗ್ಗೆ ಕೂಡ ಉಲ್ಲೇಖ ಮಾಡಲಾಗಿದೆ. ಮುಂದೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಜತೆಗೆ ಮೂಲ ನಿವಾಸಿಗಳಾದರೂ ಕೂಡ ಅರ್ಜಿ ಹಾಕಿ,‌ಪರವಾನಿಗೆ ಪಡೆದೇ ಗಣಿಗಾರಿಕೆ ನಡೆಸಬೇಕು.‌ಹೀಗಾಗಿ ಕೊರಗ ಕುಟುಂಬಗಳು ಕೂಡ ಅರ್ಜಿ ಸಲ್ಲಿಸಲಿ ಎಂದರು ಹಾಗೂ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಮೇರೆಗೆ ಪ್ರತಿಭಟನೆ ಕೈಬಿಡಲಾಯಿತು.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...