ಉಡುಪಿ | ಅಭಿವೃದ್ಧಿ, ಯುವಕರ ಸಮಸ್ಯೆಗಳತ್ತ ಪ್ರಧಾನಿ ಗಮನ ಹರಿಸಲಿ : ಕೋಟ ನಾಗೇಂದ್ರ ಪುತ್ರನ್

Date:

ಉಡುಪಿ ಜಿಲ್ಲೆಗೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತವನ್ನು ತಿಳಿಸುತ್ತಾ, ಜಿಲ್ಲೆಯ ಅಭಿವೃದ್ಧಿ, ಮೀನುಗಾರರ ಹಿತ ಮತ್ತು ಯುವಕರ ಭವಿಷ್ಯದ ಕುರಿತ ಮಹತ್ವದ ಸಮಸ್ಯೆಗಳತ್ತ ಪ್ರಧಾನಿಯವರು ಗಮನ ಹರಿಸುವ ಅಗತ್ಯವಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.

ಪ್ರಧಾನಮಂತ್ರಿ ದೇಶದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಸಮಾಲೋಚನೆ ಮತ್ತು ಹೊಸ ಯೋಜನೆಗಳ ರೂಪಿಕರಣಕ್ಕಾಗಿ ರಾಜ್ಯಗಳಿಗೆ ಭೇಟಿ ನೀಡಬೇಕಿರುವಾಗ, ಧಾರ್ಮಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡುವುದು ರಾಷ್ಟ್ರದ ಪ್ರಗತಿಗೆ ಪೂರಕವಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಉಡುಪಿಯಲ್ಲಿ ಮೋದಿ ಅವರ ಕಾರ್ಯಕ್ರಮ ವೀಕ್ಷಣೆಗೆ ಸಾಕಷ್ಟು ಮಾಧ್ಯಮ ವ್ಯವಸ್ಥೆಗಳಿದ್ದರೂ, ಅವರ ಆಗಮನದ ಹಿನ್ನೆಲೆಯಲ್ಲಿ ಶಾಲಾ–ಕಾಲೇಜುಗಳಿಗೆ ರಜೆ ನೀಡಲು ಜನಪ್ರತಿನಿಧಿಗಳು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವುದು ಪ್ರಧಾನಮಂತ್ರಿಗೇ ಮುಜುಗರ ಉಂಟುಮಾಡುವ ವಿಚಾರವೆಂದು ಹೇಳಿದರು.

ಕರಾವಳಿ ಪ್ರದೇಶದಲ್ಲಿ ಸಾಂಪ್ರದಾಯಿಕ ಮೀನುಗಾರರು ಎದುರಿಸುತ್ತಿರುವ ಸಂಕಷ್ಟಗಳನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿಯ ಹೆಸರಿನಲ್ಲಿ ಮೀನುಗಾರರನ್ನು ಒಕ್ಕಲೆಬ್ಬಿಸುವ ಕ್ರಮಗಳು ಚಿಂತಾಜನಕ ಎಂದು ಹೇಳಿದರು. ಉತ್ತರ ಕನ್ನಡದ ಕಾಸರಕೋಡು ಪ್ರದೇಶದಲ್ಲಿ ಕಾರ್ಪೊರೇಟ್ ಹಿತಾಸಕ್ತಿಗಾಗಿ ಮೀನುಗಾರರನ್ನು ಸ್ಥಳಾಂತರಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ಕರಾವಳಿಯಲ್ಲಿ ಕಾರ್ಪೊರೇಟ್ ಮೀನುಗಾರಿಕೆ ಹೆಚ್ಚುತ್ತಿರುವುದು ಮತ್ತು ರೆಸಾರ್ಟ್‌ಗಳ ವಿಸ್ತರಣೆ ಸಾಂಪ್ರದಾಯಿಕ ಮೀನುಗಾರಿಕೆಗೆ ಅಡ್ಡಿಯಾಗಿದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಬೇಕು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರಾವಳಿಯ ಯುವಕರು ನಿರುದ್ಯೋಗದ ಸಮಸ್ಯೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ಕೇಂದ್ರ ಸರ್ಕಾರದ ಯೋಜನೆಗಳನ್ನು ಯುವಕರಿಗೆ ಪರಿಚಯಿಸುವ ಬದಲು ಅವರನ್ನು ಮತೀಯವಾಗಿ ದಾರಿ ತಪ್ಪಿಸಲಾಗುತ್ತಿದೆ ಎಂದು ಅವರು ಟೀಕಿಸಿದರು. ಯುವಕರಿಗೆ ಉದ್ಯೋಗಾವಕಾಶ ಮತ್ತು ಮಾರ್ಗದರ್ಶನ ನೀಡುವುದು ಕಾಲದ ಅವಶ್ಯಕತೆ. ಪ್ರಧಾನಮಂತ್ರಿಯವರು ಮಠ–ಮಂದಿರಗಳಲ್ಲಿ ಭಕ್ತಿಯ ಪ್ರದರ್ಶನ ಮಾಡುವ ಬದಲು, ಯುವಕರ ಭವಿಷ್ಯಕ್ಕೆ ಪೂರಕವಾದ ಯೋಜನೆಗಳ ಬಗ್ಗೆ ಇಲ್ಲಿ ಮಾತನಾಡುವುದು ಅತ್ಯಂತ ಅಗತ್ಯ ಎಂದು ಕೋಟ ನಾಗೇಂದ್ರ ಪುತ್ರನ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...