ಉಡುಪಿ | ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯ 42ನೇ ವಾರ್ಷಿಕೋತ್ಸವದ ಭವ್ಯ ಸಿದ್ಧತೆ

Date:

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಶಿಕ್ಷಣ ಕ್ಷೇತ್ರಕ್ಕೆ ನಾಲ್ಕು ದಶಕಗಳ ಹಿಂದೆ ಕ್ರಾಂತಿಕಾರಕ ಬದಲಾವಣೆ ತಂದ ಪ್ರತಿಷ್ಠಿತ ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗಳು ಈಗ ತಮ್ಮ 42ನೇ ವಾರ್ಷಿಕೋತ್ಸವದ ಸಡಗರಕ್ಕೆ ಸಜ್ಜಾಗಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮ ಶಿಕ್ಷಣದಿಂದ ವಂಚಿತರಾಗಬಾರದು ಮತ್ತು ಉದ್ಯೋಗಾವಕಾಶಗಳಲ್ಲಿ ಸಮಾನ ಅವಕಾಶ ಸಿಗಬೇಕು ಎಂಬ ಧ್ಯೇಯದಿಂದ ಆರಂಭವಾದ ಈ ಸಂಸ್ಥೆ, ಹಿರಿಯರಾದ ಹಾಜಿ ಪಿ.ಎಂ. ಖಾನ್, ಕೆ.ಎಸ್ ನಜೀರ್ ಅಹಮದ್ ಮತ್ತು ಹಾಜಿ ಎ.ಎಸ್ ರಶೀದ್ ಹೈದರ್ ಈ ತ್ರಿಮೂರ್ತಿಗಳ ಕನಸುಗಳ ಫಲವಾಗಿದೆ. ಹಿರಿಯರಾದ ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ.ಎಸ್ ಮೊಹಮ್ಮದ್ ಮಸೂದ್ ಅವರ ನಿರಂತರ ಮಾರ್ಗದರ್ಶನ ಹಾಗೂ ಉದ್ಯಮಿ ಕೆ.ಎಸ್ ನಿಸಾರ್ ಅಹಮದ್ ಅವರ ನಿಸ್ವಾರ್ಥ ಸೇವೆ, ಕೆಎಂಇಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ, ಉದ್ಯಮಿ ಕೆ ಎಸ್ ಇಮ್ತಿಯಾಜ್ ಅಹ್ಮದ್ ರವರ ನಿರಂತರ ಶ್ರಮ, ಪರಿಶ್ರಮ, ಸಮಾಜ ಸೇವಾ ಪ್ರವೃತ್ತಿಯಿಂದಾಗಿ ಸಂಸ್ಥೆ ಇಂದು ದೊಡ್ಡ ಆಲದ ಮರದಂತೆ ವಿಸ್ತರಿಸಿದೆ.

ಬದಲಾದ ಶೈಕ್ಷಣಿಕ ಅಗತ್ಯಗಳನ್ನು ಗಮನದಲ್ಲಿಟ್ಟು ಸಂಸ್ಥೆಯ ಅಧ್ಯಕ್ಷರಾದ ಶ್ಕೆ.ಎಸ್ ಇಮ್ಮಿಯಾಜ್ ಅಹಮದ್ ಅವರು ಕೈಗೊಂಡ ಪರಿವರ್ತನಾ ದೃಷ್ಟಿಕೋನದಿಂದ ಸಂಸ್ಥೆ ಹೊಸ ಚೈತನ್ಯವನ್ನು ಪಡೆದಿದ್ದು, ಆಧುನಿಕ ಅವಶ್ಯಕತೆಗಳಿಗೆ ತಕ್ಕ ಶಿಕ್ಷಣ ಸೌಲಭ್ಯಗಳನ್ನು ಒದಗಿಸಲು ಮುಂದಾಗಿದೆ. ವಾರ್ಷಿಕೋತ್ಸವದ ಅಂಗವಾಗಿ 6 ಡಿಸೆಂಬರ್ 2025ರಂದು ಬ್ಯಾನರ್ ರಿಲೀಸಿಂಗ್ ಕಾರ್ಯಕ್ರಮ ನಡೆದಿದ್ದು ಹಾಗೂ 10 ಡಿಸೆಂಬರ್ 2025ರಂದು ವಿಜ್ಞಾನ ಮಾದರಿಗಳ ಅನ್ವೇಷಣಾ ಪ್ರದರ್ಶನ ಮತ್ತು ವ್ಯಾಪಾರ ಉತ್ಸವಗಳನ್ನು ಹಮ್ಮಿಕೊಳ್ಳಲಾಗಿದೆ.

WhatsApp Image 2025 12 06 at 12.44.20 PM 1

ಮುಖ್ಯ ಸಮಾರಂಭವಾದ ಕೆ.ಎಂ.ಇ.ಎಸ್ ಪರ್ವ 13 ಡಿಸೆಂಬರ್ 2025 ಶನಿವಾರ ಮಧ್ಯಾಹ್ನ 3.30ಕ್ಕೆ ಜರುಗಲಿದೆ. ಈ ಕಾರ್ಯಕ್ರಮಕ್ಕೆ ಕೆ.ಎಸ್ ಮೊಹಮ್ಮದ್ ಮಸೂದ್ ಅವರು ಅಧ್ಯಕ್ಷತೆ ವಹಿಸಲಿದ್ದು, ಕಾರ್ಕಳ ತಾಲೂಕು ತಹಶೀಲ್ದಾರ್ ಪ್ರದೀಪ್ ಆರ್, ಅಜೆಕಾರು ಪದ್ಮ ಗೋಪಾಲ ಎಜುಕೇಷನ್ ಟ್ರಸ್ಟ್ ಜ್ಞಾನಸುಧಾ ವಿದ್ಯಾಸಂಸ್ಥೆಯ PRO ಜ್ಯೋತಿ ಪದ್ಮನಾಭ ಭಂಡಿ, ಶಿರ್ಡಿ ಸಾಯಿ ಶಿಕ್ಷಣ ಸಂಸ್ಥೆ ಕಾರ್ಕಳದ ಸಿಇಓ ಆಶಿಷ್ ಶೆಟ್ಟಿ, ಮತ್ತು ಕಾಲೇಜಿನ ಪೂರ್ವ ವಿದ್ಯಾರ್ಥಿ, ಸರ್ಕಾರಿ ಆಯುರ್ವೇದ ಆಸ್ಪತ್ರೆ ಕುಶಾಲನಗರದ ಶಸ್ತ್ರಚಿಕಿತ್ಸಾ ಸಲಹೆಗಾರ್ತಿ ಡಾ. ಅಷಿತಾ ಕೃಷ್ಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಎಸ್ ಇಮ್ಮಿಯಾಜ್ ಅಹಮದ್, ಕಾರ್ಯಕಾರಿ ಸಮಿತಿಯ ಸದಸ್ಯ ಮೊಹಮ್ಮದ್ ನವಾಲ್ ಉಪಸ್ಥಿತರಿರಲಿದ್ದಾರೆ. 42 ವರ್ಷಗಳ ಸಾರ್ಥಕ ಸೇವೆಯನ್ನು ಆಚರಿಸುವ ಈ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದ ಯಶಸ್ಸಿಗೆ ಸಾರ್ವಜನಿಕರ ಸಂಪೂರ್ಣ ಸಹಕಾರವನ್ನು ನೀಡಬೇಕಾಗಿ ಕಾಲೇಜಿನ ಅಧ್ಯಕ್ಷರಾದ ಕೆ.ಎಸ್ ಇಮ್ಮಿಯಾಜ್ ಅಹಮದ್, ಪ್ರಾಂಶುಪಾಲರಾದ ಕೆ. ಬಾಲಕೃಷ್ಣ ರಾವ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪಾಟ್ಕರ್ ಹಾಗೂ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೊಲಿಟಾ ಝೀನಾ ಡಿಸಿಲ್ವಾ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...