ಉಡುಪಿ | ನಗರ ಕುಟುಂಬ ಕಲ್ಯಾಣ ಕೇಂದ್ರ ಸ್ಥಗಿತ; ಪುನರಾರಂಭಿಸಲು ಆಗ್ರಹ

Date:

ಉಡುಪಿ ನಗರದ ಕುಕ್ಕಿಕಟ್ಟೆ ಡಯಾನ ಚಿತ್ರಮಂದಿರದ ಎದುರು, ಸುಮಾರು ಇಪ್ಪತ್ತು ವರ್ಷಗಳಿಂದ ಸೇವಾ ನಿರತವಾಗಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರವು ಸೇವೆಯನ್ನು ಸ್ಥಗಿತಗೊಳಿಸಿದ್ದು, ಬಾಗಿಲಿಗೆ ಬೀಗ ಜಡಿಯಲಾಗಿದೆ. ಕಾರಣ ಎನೆಂದು ತಿಳಿದುಬಂದಿಲ್ಲ.

ಪರಿಸರದ ಸುತ್ತಮುತ್ತಲಿನ ನಾಗರಿಕರು ಚಿಕಿತ್ಸೆ ಪಡೆಯಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಶಿಶುಗಳಿಗೆ ಲಸಿಕೆ, ಚುಚ್ಚುಮದ್ದು ಹಾಗೂ ಗರ್ಭಿಣಿಯರಿಗೆ ತಪಾಸಣೆ, ಅಗತ್ಯ ಚಿಕಿತ್ಸೆಗಳು ಕ್ಲಪ್ತ ಸಮಯದಲ್ಲಿ ದೊರೆಯುತಿತ್ತು. ಅಲ್ಲದೆ ಜ್ವರಬಾಧೆ, ಶೀತ, ಕೆಮ್ಮು‌ ಮೊದಲಾದ ವ್ಯಾಧಿಗಳಿಂದ ಬಳಲುವ ರೋಗಿಗಳು ಚಿಕಿತ್ಸೆ ಪಡೆಯಲು ಅವಕಾಶವಿತ್ತು. ಎದುರಾಗಿರುವ‌ ಸಮಸ್ಯೆಯಿಂದ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಹಣತೆತ್ತು ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ಬಡ ಕುಟುಂಬಗಳ ಶಿಶುಗಳಿಗೆ, ಗರ್ಭಿಣಿಯರಿಗೆ, ರೋಗಿಗಳಿಗೆ ಎದುರಾಗಿದೆ. ಸರಕಾರದ ಉಚಿತ ಚಿಕಿತ್ಸಾ ಸೇವೆಯನ್ನು ಪಡೆಯಲು, ನಾಗರೀಕ ಸಮಾಜವು ವಂಚಿತವಾಗದಂತೆ ತಡೆಯಬೇಕಾಗಿದ್ದು ಆಡಳಿತ ವ್ಯವಸ್ಥೆಗಳ ಕರ್ತವ್ಯವಾಗಿದೆ. ತಕ್ಷಣ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆಯು, ಕರ್ತವ್ಯ ನಿಲ್ಲಿಸಿರುವ ಕುಕ್ಕಿಕಟ್ಟೆಯ ನಗರ ಕುಟುಂಬ ಕಲ್ಯಾಣ ಕೇಂದ್ರವನ್ನು ಪುನಾರಂಭಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...