ಉಡುಪಿ | ಪರ್ಮಿಟ್ ಇದ್ದೂ ಓಡಿಸದ ಖಾಸಗೀ ಬಸ್ ಮಾಲಕರ ಪರವಾನಿಗೆ ರದ್ದು ಪಡಿಸಿರಿ

Date:

ಕಳೆದ ಒಂದು ವರ್ಷದಿಂದ ಕುಂದಾಪುರ, ತ್ರಾಸಿ, ಮೊವಾಡಿ, ನಾಡ, ಪಡುಕೋಣೆ, ಕೋಣ್ಕಿ, ಬಡಾಕೆರೆ ಮಾರ್ಗವಾಗಿ ಓಡುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಖಾಸಗಿ ಬಸ್ ಮಾಲೀಕರ ಕುತಂತ್ರದಿಂದ ನಿಲುಗಡೆ ಆಗಿರುವುದನ್ನು ಪುನಃ ಆರಂಭಿಸಬೇಕೆಂದು ಆಗ್ರಹಿಸಿ ಇಂದು ನಾಡ ಮತ್ತು ಮೊವಾಡಿ ನೂರಾರು ನಾಗರಿಕರು ನಾಡ ಗ್ರಾಮ ಪಂಚಾಯತ್ ಎದುರುಗಡೆ ಧರಣಿ ನಡೆಸಿ ಪ್ರತಿಭಟಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ನಾಡ ಗ್ರಾಮ ಪಂಚಾಯತ್ ಸದಸ್ಯ ರಾಜೀವ ಪಡುಕೋಣೆ ಮಾತನಾಡಿ, ಈ ಗ್ರಾಮಗಳ ಬಸ್ ಸೇವೆಗಾಗಿ ಕಳೆದ 9 ತಿಂಗಳಿಂದ ಹೋರಾಟ ನಡೆಸಿ ಖಾಸಗೀ ಬಸ್ ಇಲ್ಲದ ಕಡೆಗಳಲ್ಲಿ ಪರವಾನಿಗೆ ಪಡೆಯಲಾಗಿದ್ದು ಉತ್ತಮ ಸೇವೆ ಸಲ್ಲಿಸಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಸುಮಾರು 30 ಲಕ್ಷ ಪ್ರಯೋಜನ ಪಡೆದಿದ್ದಾರೆ ಆದರೆ ಖಾಸಗೀ ಬಸ್ ಮಾಲಕರು ಸುಳ್ಳು ಮಾಹಿತಿ ನೀಡಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಜನರಿಗೆ ಅನ್ಯಾಯ ಮಾಡಿದ್ದಾರೆ ಇದನ್ನು ಪ್ರಶ್ನಿಸಿ ಬೀದಿ ಹೋರಾಟ ಹಾಗೂ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದರು.

1005159431

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ:ಖಾಸಗೀ ಬಸ್ ಮಾಲಕರು ಎಲ್ಲಾ ಮಾರ್ಗಗಳಲ್ಲಿ ಪರ್ಮಿಟ್ ಪಡೆದರೂ ಬಹುತೇಕ ಕಡೆಗಳಲ್ಲಿ ಬಸ್ ಓಡಿಸದೇ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಕೆಲವು ಮಾರ್ಗಗಳಲ್ಲಿ ಪರ್ಮಿಟ್ ಇಲ್ಲದೆಯೂ ಕಾನೂನು ಬಾಹಿರವಾಗಿ ಓಡುಸುತ್ತಿರುವವರ ವಿರುದ್ಧ ಪ್ರಾಧೀಕಾರದ ಕ್ರಮ ಕೈಗೊಂಡು ರದ್ದು ಪಡಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿವೈಎಫ್ಐ ಮುಖಂಡ ರಾಜೇಶ್ ಪಡುಕೋಣೆ ಮಾತನಾಡಿ, ಆಲೂರು ಹೊಯ್ಯಾಣ, ಅಕ್ಕಸಾಲಿ ಬೆಟ್ಟು ಮಾ ರ್ಗದಲ್ಲಿ ಪಕ್ಕಾ ಕೆಎಸ್ಸಾರ್ಟಿಸಿ ಪರ್ಮಿಟ್ ಇದ್ದರೂ ಕೂಡ ಸರಕಾರಿ ಬಸ್ ಓಡಿಸದೇ ಇರುವುದು ಜನರಿಗೆ ಅನುಮಾನ ಮೂಡುವಂತಾಗಿದೆ ಎಂದು ದೂರಿದರು.

ಪ್ರತಿಭಟನೆಯನ್ನುದ್ದೇಶಿಸಿ ಸ್ಥಳೀಯರಾದ ಫಿಲಿಪ್ ಡಿಸಿಲ್ವ, ಸಿಐಟಿಯು ಜಿಲ್ಲಾ ಮುಖಂಡರಾದ ಎಚ್ ನರಸಿಂಹ, ಜನವಾದಿ ಮಹಿಳಾ ಸಂಘಟನೆಯ ನಾಗರತ್ನ ನಾಡ ಮಾತನಾಡಿದರು. ಮನೋರಮ ಭಂಡಾರಿ, ಗ್ರಾಮ ಪಂಚಾಯತ್ ಸದಸ್ಯೆ ಶೋಭಾ ನಾಡ, ಡಿವೈಎಫ್ಐ ಮುಖಂಡ ನಿಸರ್ಗ, ಕಟ್ಟಡ ಕಾರ್ಮಿಕರ ಸಂಘದ ಗುಲಾಬಿ ಮೊವಾಡಿ, ಶಿವಾನಂದ ಮೊದಲಾದವರಿದ್ದರು.

ಮನವಿಯನ್ನು ಆರ್ ಟಿಓ ಅಧಿಕಾರಿ ಕಮಲ ಕುಮಾರ್, ಶಾಂತರಾಜ್, ಉದಯ ಶೆಟ್ಟಿ ಕುಂದಾಪುರ ಇವರಿಗೆ ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಮೊಗವೀರ ಅವರಿಗೂ ಮನವಿ ನೀಡಲಾಯಿತು.
ಸಭೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಲಾಯಿತು ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...