ಉಡುಪಿ | ಉದ್ಘಾಟನೆಗೂ ಮುನ್ನವೇ ಕುಸಿದ ಕೆರೆ ಏರಿ; ಕಳಪೆ ಕಾಮಗಾರಿ ವಿರುದ್ಧ ಸಾರ್ವಜನಿಕರ ಆಕ್ರೋಶ

Date:

ಉಡುಪಿ ನಗರಸಭೆ ಮತ್ತು ಉಡುಪಿ ಕೆರೆ ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಪಡಿಸಿದ್ದ ಕೆರೆಯ ಏರಿ ಉದ್ಘಾಟನೆಗೂ ಮುನ್ನವೇ ಕುಸಿದಿದ್ದು, ಆಡಳಿತದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ಉಡುಪಿ ಬಳಿಯ ಪರ್ಕಳದ ದುರ್ಗಾ ನಗರದಲ್ಲಿ ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಕೆರೆಯನ್ನು ಅಭಿವೃದ್ಧಿ ಮಾಡಲಾಗಿತ್ತು. ಕಾಮಗಾರಿ ನಡೆಯುತ್ತಿದ್ದಾಗ, ಕರೆಯ ಮಣ್ಣಿನಲ್ಲಿ ತ್ರಿಶೂಲ ಇರುವ ಕಲ್ಲು ಹಾಗೂ ಅಭಿಷೇಕ ನಡೆದ ತೀರ್ಥ ಹರಿದು ಹೋಗುವ ಕಲ್ಲಿನ ಕೊಂಡಿಸಿಕ್ಕಿದ್ದವು. ನಾಥ ಪಂಥಕ್ಕೆ ಸೇರಿದ ವಸ್ತುಗಳಾಗಿದ್ದು, ಅವು12ನೇ ಶತಮಾನದಲ್ಲಿ ಕೆತ್ತಲಾಗಿದ್ದವು ಎಂದು ಹೇಳಲಾಗಿತ್ತು. ಆಗಲೂ ಕೆರೆ ಸುದ್ದಿಯಾಗಿತ್ತು.

ಇದೀಗ, ಮತ್ತೆ ಕೆರೆ ಸುದ್ದಿಯಲ್ಲಿದ್ದು, ಕಾಮಗಾರಿ ಮುಗಿದು, ಉದ್ಘಾಟನೆ ಆಗುವ ಮುನ್ನವೇ ಕೆರೆಯ ಏರಿ ಕುಸಿದು ಬಿದ್ದಿದೆ. ಸರಿಯಾದ ರೀತಿಯಲ್ಲಿ ಕಾಮಗಾರಿ ಗುಣಮಟ್ಟ ಪರೀಕ್ಷಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆರೆ ಏರಿ ಕುಸಿದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್, “ನಗರಸಭೆ ಮತ್ತು ಉಡುಪಿ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೆರೆ ಅಭಿವೃದ್ಧಿ ಮಾಡಲಾಗಿದೆ. ಆದರೆ, ಉದ್ಘಾಟನೆಗೂ ಮುನ್ನವೇ ಕೆರೆ ಏರಿ ಕುಸಿದಿದೆ. ವಾರದ ಹಿಂದೆ ಪರ್ಕಳ ಮಾಲಿಂಗೇಶ್ವರದ ದೇವಸ್ಥಾನದ ಎದುರುಗಡೆ ಎರಡು ಕೋಟಿ ಇರುವ ವೆಚ್ಚದಲ್ಲಿ ನೀರಾವರಿ ಇಲಾಖೆಯಿಂದ ನಿರ್ಮಾಣವಾದ ಕೆರೆ ನಾಲ್ಕನೇ ಬಾರಿ ಕುಸಿತ ಕಂಡಿದೆ. ಕಾಮಗಾರಿಗಳ ಗುಣಮಟ್ಟವನ್ನು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...