ಉಡುಪಿ | ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರದ ಸಂಪೂರ್ಣ ಬೆಂಬಲ, ಸಂಪನ್ಮೂಲದ ಕೊರತೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

ನಾನು ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತೆ, ನವೆಂಬರ್ ತಿಂಗಳ ಕ್ರಾಂತಿ, ಶಾಂತಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕನ್ನಡ ರಾಜ್ಯೋತ್ಸವದ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬದಲಾವಣೆ ಎಐಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ. ನಾನು ಸೇರಿದಂತೆ ಎಲ್ಲರೂ ಪಕ್ಷ ಹೇಳಿದಂತೆ ಕೇಳುತ್ತೇವೆ‌. ಪಕ್ಷ ನನ್ನನ್ನು ಗುರುತಿಸಿ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದೆ. ನಿಮ್ಮ ಕೆಲಸ ಬೇರೆ ಇದೆ ಎಂದು ಪಕ್ಷ ಸೂಚಿಸಿದರೂ ಸಂತೋಷದಿಂದ ಕೇಳುತ್ತೇವೆ ಎಂದರು.‌

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿ. ಸೋನಿಯಾ ಗಾಂಧಿ ಅವರ ತ್ಯಾಗದ ಮಾತನ್ನು ಬಹಳಷ್ಟು ಸಾರಿ ಹೇಳಿದ್ದಾರೆ. ಇದಕ್ಕೆ ವಿಶೇಷ ಅರ್ಥವನ್ನು ಕಲ್ಪಿಸುವುದು ಬೇಡ. ಗಾಂಧಿ ಪರಿವಾರದ ಇಂದಿರಾಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಇತಿಹಾಸದ ಬಗ್ಗೆ ನಮಗೆಲ್ಲ ಗೊತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವೆಂಬರ್ ಕ್ರಾಂತಿ ಅಂದರೆ ಬರೀ ಭ್ರಾಂತಿಯಷ್ಟೇ ಎಂದಿರುವ ಸಚಿವ ಹೆಚ್.ಸಿ ಮಹಾದೇವಪ್ಪ ಅವರ ಹೇಳಿಕೆ‌ಗೆ ಪ್ರತಿಕ್ರಿಯಿಸಿದ ಸಚಿವರು, ಅವರು ನಮ್ಮ ಪಕ್ಷದ ಹಿರಿಯ ಮುಖಂಡರು, ಸಂಪುಟದಲ್ಲಿ ಅತ್ಯಂತ ಬುದ್ಧಿವಂತ ಮಂತ್ರಿ. ಅವರೇನು ಹೇಳಿದರೂ ಅದಕ್ಕೆ ನಾನು ಬೆಂಬಲಿಸುತ್ತೇನೆ ಎಂದು ಹೇಳಿದರು.

  • ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಹೋರಾಟಕ್ಕೆ ಬೆಂಬಲ ಇಲ್ಲ
    ಕರ್ನಾಟಕ ರಾಜ್ಯೋತ್ಸವ ದಿನ ಬಹಳ ಪವಿತ್ರವಾದದ್ದು. ಪ್ರತ್ಯೇಕ ಧ್ವಜ ಹಾರಿಸಿದವರಿಗೆ ನಾನು ಬೆಂಬಲ ಮಾಡಲ್ಲ. ಕರ್ನಾಟಕದ ಏಕೀಕರಣಕ್ಕೆ ಹಿರಿಯರು, ಸಾಹಿತಿಗಳು ಹೋರಾಟ ಮಾಡಿದ್ದಾರೆ. ಈ ಸುಸಂದರ್ಭದಲ್ಲಿ ಈ ಬೆಳವಣಿಗೆಗಳ ಬಗ್ಗೆ ನಾನು ಮಾತಾಡಲ್ಲ. ಈ ಬೆಳವಣಿಗೆ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದರು. ಪ್ರತಾಪ್ ಸಿಂಹ- ಪ್ರದೀಪ್ ಈಶ್ವರ್ ಕೀಳು ಮಟ್ಟದ ಮಾತು ನಿಲ್ಲಿಸಿ
    ಶಾಸಕ ಪ್ರದೀಪ್ ಈಶ್ವರ್ ಹಾಗೂ ಮಾಜಿ ಸಂಸದ ಪ್ರತಾಪ್‌ ಸಿಂಹ ನಡುವಿನ ಮಾತಿನ ಸಮರಕ್ಕೆ ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ಅಕ್ಕನ ಸ್ಥಾನದಲ್ಲಿ ನಿಂತು ಇಬ್ಬರಿಗೂ ಕಿವಿಮಾತು ಹೇಳುತ್ತೇನೆ. ನನ್ನ ವಿಚಾರದಲ್ಲೂ ಬಹಳಷ್ಟು ಅಪಮಾನಗಳನ್ನು ಅನುಭವಿಸಿದ್ದೇನೆ. ರಾಜಕಾರಣಿಗಳನ್ನು ಜನ ಗಮನಿಸುತ್ತಿದ್ದಾರೆ. ನಾವು ರೋಲ್ ಮಾಡೆಲ್ ಆಗಬೇಕೆ ಹೊರತು ನಾಚಿಕೆ ಆಗುವಂತೆ ವರ್ತಿಸಬಾರದು ಎಂದರು.‌

ನಿಮ್ಮ ಆಚಾರ ವಿಚಾರ ಭಾಷೆಯನ್ನು ಜನ ನೋಡುತ್ತಾರೆ. ನಿಮ್ಮ ತಂದೆ ತಾಯಿಯನ್ನು ಎಳೆಯುವುದು. ಸರಿಯಲ್ಲ, ಇಲ್ಲಿಗೆ ಬಿಟ್ಟುಬಿಡಿ. ಇಬ್ಬರೂ ಬುದ್ಧಿವಂತರಿದ್ದೀರಿ, ಸಾಕು ಇಲ್ಲಿಗೇ ಬಿಟ್ಟುಬಿಡಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿವಿ ಮಾತು ಹೇಳಿದರು.

  • ಧರ್ಮಸ್ಥಳ ಕೇಸ್: ಹೈಕೋರ್ಟ್ ತೀರ್ಪು ಪಾಲನೆ
    ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಗೆ ಕೋರ್ಟ್ ನಿರ್ಬಂಧನೆಯನ್ನು ಹೇರಿದೆ. ಕೋರ್ಟ್‌ ಆದೇಶವನ್ನು ನಾವು ಪಾಲಿಸಬೇಕು, ಪಾಲಿಸುತ್ತಿದ್ದೇವೆ. ಸರ್ಕಾರಕ್ಕೆ, ತನಿಖೆಗೆ ಹಿನ್ನಡೆ ಆಗಿದೆ ಎಂಬ ಚರ್ಚೆ ಸರಿಯಲ್ಲ.‌ ತಡೆಯಾಜ್ಞೆಯನ್ನು ತೆರವು ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ. ಧರ್ಮಸ್ಥಳ ಪವಿತ್ರ ಕ್ಷೇತ್ರ ಕ್ಷೇತ್ರ ಎಂಬ ಸಂದೇಶ ಹೊರಗೆ ಬರಬೇಕು ಎಂದರು.‌ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪೂರ್ಣ ಸಹಕಾರ ಕೊಡುತ್ತದೆ. ಸರಕಾರಕ್ಕೆ ಸಂಪನ್ಮೂಲದ ಕೊರತೆ ಇಲ್ಲ, ಸರಾಗವಾಗಿ ಸಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...