ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಇವರ ಸಹಯೋಗದೊಂದಿಗೆ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವು ನವೆಂಬರ್ 17 ರಂದು ಬೆಳಗ್ಗೆ 10 ಗಂಟೆಗೆ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಉದ್ಘಾಟಿಸಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ, ಹಿರಿಯ ನಾಗರಿಕರ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಹೆಚ್. ವಿಶ್ವನಾಥ ಹೆಗ್ಡೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.




