ಉಡುಪಿ | ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್‌ನಿಂದ ಅನ್ಯಾಯ: ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

Date:

ಉಡುಪಿ ನಗರದ ಮಲ್ಪೆಯಲ್ಲಿರುವ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕಿನಿಂದ ಅನ್ಯಾಯ ಆಗಿರುವ ಸಂತ್ರಸ್ತರು, ಸೋಮವಾರ ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿಯವರ ಕಚೇರಿಯ ತನಕ ಪಾದಯಾತ್ರೆ ಮಾಡಿದ ಸಂತ್ರಸ್ಥರು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಮಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ ಸಂತ್ರಸ್ತರು, ಭ್ರಷ್ಟಾಚಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಲ್ಲಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂತ್ರಸ್ತೆ ಬಿಂದು, “ಮೂರು ನಾಲ್ಕು ಜನ ಜೀಪಿನಲ್ಲಿ ಬಂದು ಹಣ ಕಟ್ಟಬೇಕು, ಕಾಲಿ ಪೇಪರ್‌ನಲ್ಲಿ ಸಹಿ ಹಾಕಿ ಎಂದು ತುಂಬಾನೆ ಟಾರ್ಚಾರ್ ನೀಡ್ತಾ ಇದ್ದಾರೆ. ನಾನು ಸೊಸೈಟಿಯಿಂದ ತೆಗೆದುಕೊಂಡದ್ದು ಕೇವಲ ಇಪ್ಪತ್ತು ಸಾವಿರ ಮಾತ್ರ. ಆದರೆ ಈಗ ಅವರು ಎರಡು ಲಕ್ಷ ಕಟ್ಟುಂವಂತೆ ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ. ಇವರ ಬೆದರಿಕೆಗೆ ಅಂಜಿ ಈಗಾಗಲೇ ಎಪ್ಪತ್ತು ಸಾವಿರ ಹಣವನ್ನು ಸಹ ಕಟ್ಟಿದ್ದೇನೆ. ಈ ರೀತಿ ನನಗೆ ಮಾತ್ರವಲ್ಲ ಇತರರಿಗೂ ಹಣ ಕಟ್ಟುವಂತೆ ಬೆದರಿಸುತ್ತಿದ್ದಾರೆ ನಮಗೆ ನ್ಯಾಯವನ್ನು ದೊರಕಿಸಿ ಕೊಡಿ” ಎಂದು ತಮ್ಮ ನೋವು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಕೋಟ ಮಾತನಾಡಿ, “ಸಾಲದ ಹೆಸರಿನಲ್ಲಿ 1413 ಮಂದಿಗೆ 28 ಕೋಟಿ ರೂ. ಹಣವನ್ನು ಮೋಸ ಮಾಡಲಾಗಿದೆ. ಈ ಮೋಸದ ಜಾಲದಲ್ಲಿರುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರಗಿಸಬೇಕು” ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಉಡುಪಿ | ಮುಗಿಯದ ಇಂದ್ರಾಳಿ ರೈಲ್ವೆ ಸೇತುವೆ ರಸ್ತೆ ಸಮಸ್ಯೆ; ಪ್ರತಿಭಟನೆಗೆ ಮುಂದಾದ ನಾಗರಿಕರು

“ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ವ್ಯವಸ್ಥಾಪಕರ ಆತ್ಮಹತ್ಯೆಗೆ ಕಾರಣರಾದವರನ್ನು ಉನ್ನತಮಟ್ಟದ ತನಿಖೆ ನಡೆಸಿ ಮೋಸ ಹೋದವರಿಗೆ ಹಾಗೂ ಮೃತ ವ್ಯವಸ್ಥಾಪಕರಿಗೆ ನ್ಯಾಯ ಒದಗಿಸಿಕೊಡಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಸದಸ್ಯರಾದ ರಮೇಶ್ ಕಾಂಚನ್ ಸೇರಿದಂತೆ ಎಲ್ಲಾ ಸಂತ್ರಸ್ತರು ಉಪಸ್ಥಿತರಿದ್ದರು.

udp 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...