ಉಡುಪಿ ಪ್ರಕರಣ | ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್

Date:

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಮಲ್ಪೆ ಪೊಲೀಸರು, ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹೇಳಿಕೆ ನೀಡಿದ್ದ ಕಾಲೇಜು ಆಡಳಿತ ಮಂಡಳಿ, “ವಿಡಿಯೋ ಮಾಡಲು ಮೊಬೈಲ್ ಇಟ್ಟಿದ್ದನ್ನು ವಿದ್ಯಾರ್ಥಿನಿಯರು ಒಪ್ಪಿಕೊಂಡಿದ್ದಾರೆ. ಆದರೆ, ಸಂತ್ರಸ್ತ ವಿದ್ಯಾರ್ಥಿನಿಯು ತಪ್ಪಿತಸ್ಥ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌” ಎಂದು ತಿಳಿಸಿದ್ದರು.

ಈ ಬೆಳವಣಿಗೆಯ ಬಳಿಕ ಬಿಜೆಪಿ ಮತ್ತು ಕೆಲವು ಸಂಘಟನೆಗಳು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಒತ್ತಡ ಹಾಕಿದ್ದರು. ಈ ನಡುವೆಯೇ ಮಲ್ಪೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿಯ ಕಾಲೇಜಿನಲ್ಲಿ ನಡೆದಿದ್ದೇನು? ಬಿಜೆಪಿ ನಾಯಕರು ಹೇಳುತ್ತಿರುವುದೇನು? ಇಲ್ಲಿದೆ ವಿವರ

ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ, ಅಲೀಮಾ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲಿಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವ ಉದ್ದೇಶದಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಐಪಿಸಿಯ ಕಲಂ 509,204,175,34 ಮತ್ತು 66(E) ಐಟಿ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ ಘಟನೆಯು ರಾಜ್ಯಾದ್ಯಂತ ರಾಜಕೀಯ ಚರ್ಚೆಗೆ ವೇದಿಕೆಯೊದಗಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...