ಉಡುಪಿ | ನೇಣು ಬಿಗಿದು ಆತ್ಮಹತ್ಯೆ, ಪ್ರಕರಣ ದಾಖಲು

Date:

ಜೀವನದ ಜಿಗುಪ್ಸೆಯಿಂದ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಹಗ್ಗ ತುಂಡಾಗಿ ಮನೆಯ ಮೊದಲ‌ ಅಂತಸ್ತಿನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ 80ನೇ ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ನಡೆದಿದೆ.

ಮನೆಯ ಮೊದಲ ಅಂತಸ್ತಿನಿ ಮೇಲ್ಛಾವಣಿಯ ಕಬ್ಬಿಣದ ಅಡ್ಡಪಟ್ಟಿಗೆ ನೇಣುಬೀಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ನೇಣುಕುಣಿಕೆಯಲ್ಲಿ ನರಳಾಡುತ್ತಿದ್ದಾಗ, ದೇಹದ ಭಾರ ನಿಯಂತ್ರಣಕ್ಕೆ ಸಿಗದೆ, ಹಗ್ಗವು ತುಂಡಾದ ಪರಿಣಾಮ, 20 ಅಡಿಗಿಂತಲೂ ಅಧಿಕ ಎತ್ತರದಿಂದ ಮನೆಯ‌ ಹೊರಾಂಗಣಕ್ಕೆ ಬಿದ್ದಿದ್ದಾರೆ. ತಲೆ ಭಾಗಕ್ಕೆ ಗಂಭೀರ ಗಾಯವಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಮೆಲ್ರಾಯ್(55) ಎಂದು ತಿಳಿದುಬಂದಿದೆ. ಮಣಿಪಾಲ ಪೊಲೀಸ್ ಠಾಣೆಯ ಪಿಎಸ್‌ಐ ಅನಿಲ್ ಕುಮಾರ್, ಎಎಸ್‌ಐ ನಾಗೇಶ್ ನಾಯ್ಕ್, ಸಿಬ್ಬಂದಿ ವಿದ್ಯಾ ಘಟನಾ ಸ್ಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ವಿಧಿವಿಜ್ಞಾನ ತಜ್ಞರಾದ ಪ್ರಸನ್ನ, ಲಾವಣ್ಯ, ಹರೀಶ್ ಸ್ಥಳ ಪರಿಶೀಲನೆ ನಡೆಸಿದರು.‌ ಬಳಿಕ ಶವವನ್ನು ಮಣಿಪಾಲ ಆಸ್ಪತ್ರೆಯ ವೈದಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸುವಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಇಲಾಖೆಗೆ ನೆರವಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ರಸ್ತೆಯಲ್ಲಿ ತಲೆಬುರಡೆ, ಎಲುಬುಗಳನ್ನಿಟ್ಟು ಮೌಢ್ಯಾಚರಣೆ; ಸಾರ್ವಜನಿಕರಲ್ಲಿ‌ ಆತಂಕ

ಮೃತರು ತಮ್ಮ ಮರಣಾನಂತರ ನವದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆ, ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆಗೆ ಅಂಗಾಂಗ ದಾನ ಮಾಡಲು 2018ರಲ್ಲಿ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಅಂಗಾಗ ದಾನ ಪ್ರತಿಜ್ಞಾ ಪತ್ರವನ್ನು ಪಡೆದಿದ್ದರು. ಸ್ಥಳದಲ್ಲಿ ಲಭ್ಯವಾಗಿರುವ ದಾನ ಪತ್ರದಲ್ಲಿ ಯಕೃತ್, ಕರುಳು, ಕಣ್ಣಿನ ಚೆಂಡುಗಳು, ಚರ್ಮ, ಮೂಳೆಗಳು, ಹೃದಯ ಕವಾಟಗಳು, ರಕ್ತನಾಳಗಳನ್ನು ದಾನ ನೀಡುವ ಉಲ್ಲೇಖಗಳಿದ್ದವು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...