ಉಡುಪಿ | ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಜಾರಿಯಲ್ಲಿರುವ ಕಾನೂನು ಕಟ್ಟುನಿಟ್ಟಾಗಿ ಪಾಲಿಸಿ : ಮನು ಪಟೇಲ್ ಬಿ.ವೈ

Date:

ಮಾನವ ಕಳ್ಳ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದ್ದು, ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವನ್ನು ಕಟ್ಟುನಿಟ್ಟಾಗಿ
ಪಾಲಿಸಬೇಕು ಹಾಗೂ ವಿವಿಧ ಭಾಗೀದಾರ ಇಲಾಖೆಗಳು ಕೈಜೋಡಿಸಿ ಈ ರೀತಿಯ ಕಾನೂನು ಬಾಹಿರ ಚಟವಟಿಕೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ ಹೇಳಿದರು.

ಅವರು ಇಂದು ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ, ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ತರಬೇತಿ – ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದೆ. ಇದನ್ನು ತಡೆಗಟ್ಟುವಲ್ಲಿ ಪೋಲೀಸ್, ಕಾರ್ಮಿಕ ಇಲಾಖೆ, ಮೊದಲಾದ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಪ್ರಕರಣಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದರು.

ಉಡುಪಿಯ ಉಪ ಪೋಲೀಸ್ ನಿರೀಕ್ಷಕ ಗೋಪಾಲಕೃಷ್ಣ ಜೋಗಿ ಮಾತನಾಡಿ, ಭಾಗೀದಾರ ಇಲಾಖೆಗಳಿಗೆ ಇದೊಂದು ಅರ್ಥಪೂರ್ಣ ಕಾರ್ಯಾಗಾರವಾಗಿದ್ದು, ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ ಮಾತನಾಡಿ, ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲಾ ಭಾಗೀದಾರ ಇಲಾಖೆಗಳ ಪಾತ್ರ ಮತ್ತು ಜವಾಬ್ದಾರಿ ಮಹತ್ವದಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಇದರ ಅರಿವನ್ನು ಮೂಡಿಸುವ ಅವಶ್ಯಕತೆ ಇದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ನೇಟಿವ್ ಆರ್ಗನೈಸೇಷನ್ ಕುಂದಾಪುರ ವ್ಯವಸ್ಥಾಪಕ ಪೇಮಾನಂದ ಕಲ್ಮಾಡಿ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆ ಕುರಿತು ಕ್ರಮಬದ್ಧ ಕಾರ್ಯ ವಿಧಾನ ಎನ್ನುವ ವಿಚಾರದ ಬಗ್ಗೆ ಹಾಗೂ ವಕೀಲೆ ಸೌಮ್ಯ ಅಶೋಕ್ ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆ ಹಾಗೂ ಐಟಿಡಿಪಿ 1956 ಕಾಯ್ದೆಯ ಅನುಷ್ಟಾನ ಕುರಿತಂತೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಉಪನಿರೀಕ್ಷಕರಾದ ನಾರಾಯಣ ಮತ್ತು ಪ್ರಕಾಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆಯ ಪ್ರಾಂಶುಪಾಲರು, ಕಾರ್ಮಿಕ ನಿರೀಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ರಾಜ್ಯ ಮಹಿಳಾ ನಿಲಯ ಅಧೀಕ್ಷಕರು, ಬಾಲಕಿಯರ ಬಾಲಮಂದಿರ, ಬಾಲಕರ ಬಾಲಮಂದಿರ, ಪರಿವೀಕ್ಷಣಾಧಿಕಾರಿ ವೀಕ್ಷಣಾಲಯ, ಹಿರಿಯ ಮೇಲ್ವಿಚಾರಕಿ/ಮೇಲ್ವಿಚಾರಕಿ, ಪ್ರವಾಸೋದ್ಯಮ ಇಲಾಖೆಯ ಪ್ರವಾಸಿಮಿತ್ರರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ, ಸಖಿ ಒನ್ ಸ್ಟಾಪ್ ಸೆಂಟರ್ ಸಿಬ್ಬಂದಿಗಳು, ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ಉಡುಪಿ, ಕಾರ್ಕಳ, ಕುಂದಾಪುರ ಸಿಬ್ಬಂದಿ, ಆರಕ್ಷಕ ಇಲಾಖಾ ಅಧಿಕಾರಿ/ಸಿಬ್ಬಂದಿ, ಆಶಾ
ಕಾರ್ಯಕರ್ತೆಯರು ಭಾಗವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧಾ ಬಿ ಹಾದಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ದೀಪಾ ನಿರೂಪಿಸಿ, ಶಾರದಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...