ಉಡುಪಿ | ನಾಪತ್ತೆಯಾಗಿದ್ದ ಹೆಡ್‌ ಕಾನ್‌ಸ್ಟೇಬಲ್ ಶವವಾಗಿ ಪತ್ತೆ

Date:

ಕರ್ತವ್ಯಕ್ಕೆಂದು ಅಕ್ಟೋಬರ್ 15ರ ರಾತ್ರಿ ಮನೆಯಿಂದ ಕಾರ್ಕಳ ನಗರ ಠಾಣೆಗೆ ತೆರಳಿದ್ದು, ಅ.19ರಂದು ಮನೆಗೆ ಬರುತ್ತಿರುವುದಾಗಿ ದೂರವಾಣಿ ಕರೆ ಮಾಡಿ ಹೇಳಿದ್ದ ಕಾರ್ಕಳ ನಗರ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಬಳಿಕ ನಾಪತ್ತೆಯಾಗಿದ್ದರು. ಇದೀಗ ಸೋಮವಾರ ಬೆಳಿಗ್ಗೆ 11ಗಂಟೆ ಸುಮಾರಿಗೆ ಮೃತದೇಹ ಪತ್ತೆಯಾಗಿದೆ.

ಕಾಪು ತಾಲೂಕು ಮಜೂರು ಗ್ರಾಮದ ಜನಾರ್ದನ ದೇವಸ್ಥಾನದ ಬಳಿ ಇರುವ ಅಂಗಡಿಮನೆ ನಿವಾಸಿಯಾದ ಶೃತಿನ್ ಶೆಟ್ಟಿ(35) ಎರಡು ತಿಂಗಳ ಹಿಂದಷ್ಟೇ ಬಡ್ತಿ ಪಡೆದು ಕಾರ್ಕಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು. ಅ.15ರಂದು ರಾತ್ರಿ ಮನೆಯಿಂದ ಕರ್ತವ್ಯಕ್ಕೆಂದು ತೆರಳಿದ್ದ ಅವರು ಅ.19ರ ಬೆಳಗ್ಗೆ 7:30ಕ್ಕೆ ಪತ್ನಿಗೆ ಕರೆ ಮಾಡಿ ತಾನೀಗ ನಂದಿಕೂರಿನಲ್ಲಿದ್ದು, ಮನೆಗೆ ಬರುವುದಾಗಿ ತಿಳಿಸಿದ್ದ‌ರು ಎನ್ನಲಾಗಿದೆ.

ಮನೆಗೆ ಕರೆ ಮಾಡಿದ ಬಳಿಕ ಅವರ ಫೋನ್ ಸ್ವೀಚ್‌ಆಫ್ ಆಗಿತ್ತು. ಅವರ ನಾಪತ್ತೆ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಇಂದು ಬೆಳಿಗ್ಗೆ ಸಾಣೂರು ಗ್ರಾಮದ ಶ್ರೀಲಕ್ಷ್ಮೀದೇವಿ ಕಲ್ಯಾಣಮಂಟಪದ ಬಳಿಯ ಬಾವಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಮನಗರ | ₹6.25 ಕೋಟಿ ವೆಚ್ಚದಲ್ಲಿ ಕಾಮಗಾರಿ; ಜನರಿಗೆ ಸಿಗದ ಕಾವೇರಿ ನೀರು

ಅಗ್ನಿಶಾಮಕ ದಳದಿಂದ ಮೃತದೇಹವನ್ನು ಮೇಲಕ್ಕೆತ್ತಿ ನೋಡಿದಾಗ ಶೃತಿನ್ ಶೆಟ್ಟಿ ಅವರದೆಂದು ದೃಢಪಡಿಸಲಾಗಿದೆ. ಯಾವುದೋ ಕಾರಣದಿಂದ ಮನಸ್ಸಿಗೆ ಬೇಸರಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...