ಉಡುಪಿ | ಗ್ಯಾರೇಜ್ ಕಾರ್ಮಿಕರ ಸಮಸ್ಯೆಗಳಿಗೆ ಧನಾತ್ಮಕವಾಗಿ ಸ್ಪಂದಿಸಿದ ಶಾಸಕ ಯಶಪಾಲ್ ಸುವರ್ಣ

Date:

ಜಾಗತೀಕರಣದ ಇಂದಿನ ವಾತಾವರಣದಲ್ಲಿ ಗ್ಯಾರೇಜ್ ಮಾಲೀಕರು ಮತ್ತು ಕಾರ್ಮಿಕರು ಸವಾಲಿನ ಪರಿಸ್ಥಿತಿಯಲ್ಲಿ ವೃತ್ತಿಯನ್ನು ನಡೆಸುತ್ತಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ದೊರಕುವ ಸರ್ಕಾರಿ ಸೌಲಭ್ಯಗಳ ಮಾಹಿತಿಯ ಕೊರತೆಯಿಂದ ಅವರು ವಂಚಿತರಾಗಿದ್ದಾರೆ. ಅಸಂಘಟಿತ ವರ್ಗಕ್ಕೆ ದೊರಕುವ ಎಲ್ಲ ಸೌಲಭ್ಯಗಳನ್ನು ಗ್ಯಾರೇಜ್ ಕಾರ್ಮಿಕರಿಗೆ ದೊರಕಿಸುವ ನಿಟ್ಟಿನಲ್ಲಿ ಓರ್ವ ಜನಪ್ರತಿನಿಧಿಯಾಗಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಉಡುಪಿಯ ಶಾಸಕ ಯಶಪಾಲ್ ಸುವರ್ಣ ಅವರು ನುಡಿದರು.

ಉಡುಪಿಯ ಬೈಲೂರಿನ ಆಶಾನಿಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ ಆರ್ ರವರು ಕಾರ್ಮಿಕ ಇಲಾಖೆಯ ನಿಯಮ ನಿಬಂಧನೆಗಳ ಬಗ್ಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಮಾವೇಶದಲ್ಲಿ ಸಂಜೀವ ದೇವಾಡಿಗ ಬೈಂದೂರು, ಆನಂದ್ ಸೇರಿಗಾರ್ ದೊಡ್ಡಣ್ಣಗುಡ್ಡೆ, ಮತ್ತು ರಾಘವೇಂದ್ರ ಆಚಾರ್ಯ ಆದಿ ಉಡುಪಿ ಇವರನ್ನು ಸನ್ಮಾನಿಸಿದರು. ಸಂಘದ ವತಿಯಿಂದ ಆಶಾ ನಿಲಯದ ವಿಕಲಚೇತನ ಮಕ್ಕಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಮಾಡಿದ್ದರು. ಸಂಘದ ಸದಸ್ಯರಿಗೆ ನೂತನವಾಗಿ ನವೀಕರಿಸಿದ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಂಬೇಡ್ಕರ್ ಅರಿವು, ದೇಶದ ಉಳಿವು: ಮಲ್ಕುಂಡಿ ಮಹಾದೇವಸ್ವಾಮಿ

ಸಂಘದ ಅಧ್ಯಕ್ಷ ರೋಷನ್ ಕರ್ಕಡ ಕಾಪು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಶ್ರೀ ಕೃಷ್ಣ ಮಠದ ವಕ್ತಾರ ಉಲ್ಲಾಸ್ ಕುಲಕರ್ಣಿ, ಉಡುಪಿ ಕ್ಲಾಸಿಕ್ ಆಟೋಮೋಬೈಲ್  ಆಡಳಿತ ನಿರ್ದೇಶಕ ಸಂತೋಷ್ ಕುಮಾರ್, ವಿಮಾ ವಕ್ತಾರ ರವೀಂದ್ರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘ ಮಂಗಳೂರಿನ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್, ಪದಾಧಿಕಾರಿಗಳಾದ ದಿನೇಶ್ ಬಂಗೇರ, ಎಂ ನಾರಾಯಣ್, ತಾಲೂಕು ಅಧ್ಯಕ್ಷರುಗಳಾದ ನಾರಾಯಣ ಆಚಾರ್ ಕುಂದಾಪುರ, ಕೃಷ್ಣಯ್ಯ ಮದ್ದೋಡಿ ಬೈಂದೂರು, ನಾರಾಯಣ ಪೂಜಾರಿ ಬ್ರಹ್ಮಾವರ, ಅಬ್ದುಲ್ ಹಮೀದ್ ಕಾರ್ಕಳ, ಗೌರವ ಸಲಹೆಗಾರರಾದ ಪ್ರಭಾಕರ್ ಕೆ, ಯಾದವ ಶೆಟ್ಟಿಗಾರ್, ಉದಯ್ ಕಿರಣ್, ಜಯ ಸುವರ್ಣ, ಉಪಾಧ್ಯಕ್ಷರಾದ ರಾಜೇಶ್ ಜತ್ತನ್, ವಿನಯ್ ಕುಮಾರ್ ಕಲ್ಮಾಡಿ, ಕೋಶಾಧಿಕಾರಿ ಸಂತೋಷ್ ಕುಮಾರ್, ಕ್ರೀಡಾ ಕಾರ್ಯದರ್ಶಿ ಮಧುಸೂದನ್ ಕನ್ನರ್ಪಾಡಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...