ಉಡುಪಿ | ಅನ್ನಭಾಗ್ಯ ಯೋಜನೆ, ನಗದು ವರ್ಗಾವಣೆ ಬದಲಾಗಿ ಅಕ್ಕಿ ವಿತರಣೆ

Date:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಸದಸ್ಯರಿಗೆ ಪ್ರತಿ ಮಾಹೆಯಲ್ಲಿ 10 ಕೆ.ಜಿ ಅಕ್ಕಿ ದೊರಕಬೇಕೆಂಬ ಉದ್ದೇಶದಿಂದ ಜುಲೈ 2023 ರ ಮಾಹೆಯಿಂದ ನೀಡಲಾಗುತ್ತಿದ್ದ ನಗದು ವರ್ಗಾವಣೆಯ ಬದಲಾಗಿ ಪ್ರತಿ ಮಾಹೆಯಲ್ಲಿ ಎನ್.ಎಫ್.ಎಸ್.ಎ ಯೋಜನೆಯ ಅಕ್ಕಿ ಹಂಚಿಕೆಯೊಂದಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಫೆಬ್ರವರಿ ತಿಂಗಳಿಂದ ಅನ್ವಯವಾಗುವಂತೆ ಮಾರ್ಚ್ ತಿಂಗಳಿಂದ ನೀಡಲಾಗುತ್ತದೆ.

ಅದರಂತೆ ಮಾರ್ಚ್ ತಿಂಗಳಲ್ಲಿ ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಎನ್.ಎಫ್.ಎಸ್ ಯೋಜನೆಯ 5 ಕೆ.ಜಿ, ಫೆಬ್ರವರಿ ತಿಂಗಳ ಅನ್ನಭಾಗ್ಯ ಯೋಜನೆಯ ಬಾಬ್ತು 5 ಕೆ.ಜಿ ಅಕ್ಕಿ, ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆಯ 5 ಕೆ.ಜಿ. ಅಕ್ಕಿ ಸೇರಿ ಒಟ್ಟು ಈ ತಿಂಗಳಲ್ಲಿ 15 ಕೆ.ಜಿ ಅಕ್ಕಿಯನ್ನು ಆದ್ಯತಾ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ವಿತರಿಸಲಾಗುತ್ತದೆ.

ಅಂತ್ಯೋದಯ ಪಡಿತರ ಚೀಟಿಗಳಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಂಚಿಕೆ ಇರುವುದರಿಂದ 2025 ರ ಮಾರ್ಚ್ ತಿಂಗಳಿನಿಂದ ಏಕಸದಸ್ಯ, ದ್ವಿಸದಸ್ಯ, ತ್ರಿಸದಸ್ಯರನ್ನು ಹೊಂದಿರುವ ಅಂತ್ಯೋದಯ ಪಡಿತರ ಚೀಟಿಗಳನ್ನು ಹೊರತುಪಡಿಸಿ 4 ಮತ್ತು 4 ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳಿಗೆ ಪ್ರತಿ ತಿಂಗಳಲ್ಲಿ ಹೆಚ್ಚುವರಿ ಸದಸ್ಯರಿಗೆ 5 ಕೆ.ಜಿ. ಅಕ್ಕಿಯನ್ನು ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...