ಉಡುಪಿ | ತಾಯಿ-ಮಕ್ಕಳ ಹತ್ಯೆ ಪ್ರಕರಣ; ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ

Date:

ಉಡುಪಿ ಸಮೀಪದ ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್‌ ಚೌಗುಲೆ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿ ಇಂದು ಆದೇಶ ಹೊರಡಿಸಿದೆ.

ಚೌಗುಲೆ ಮಾರ್ಚ್ 13ರಂದು ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ವಿಶೇಷ ಸರ್ಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾರ್ಚ್ 27ರಂದು ಆಕ್ಷೇಪಣೆ ಸಲ್ಲಿಸಿದ್ದರು. ಈ ಕುರಿತು ಆರೋಪಿಪರ ವಕೀಲ ರಾಜೇಶ್ ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರ ಮಧ್ಯೆ ವಾದ ಪ್ರತಿವಾದಗಳು ನಡೆದವು. ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಜಾಮೀನು ಅರ್ಜಿಯ ಕುರಿತ ಅಂತಿಮ ಆದೇಶವನ್ನು ಮಾರ್ಚ್ 30ಕ್ಕೆ ನಿಗದಿಪಡಿಸಿ ಆದೇಶ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕೋಮುವಾದಿ ಬಿಜೆಪಿ ಜೊತೆ ಸೇರಿದ ‘ಎಚ್‌ಡಿಕೆ’ಗಿಲ್ಲ ಬೆಂಬಲ; ಕಾಂಗ್ರೆಸ್‌ಗೆ ಜೈ ಎಂದ ದಲಿತ ಸಂಘಟನೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಮೇಲಿನ ಆರೋಪಗಳು ಎಫ್‌ಎಸ್‌ಎಲ್ ವರದಿ ಸೇರಿದಂತೆ ಇನ್ನಿತರ ಸಾಕ್ಷ್ಯಗಳಿಂದ ಮೇಲ್ನೋಟಕ್ಕೆ ಕಂಡುಬಂದಿದ್ದು, ಜಾಮೀನು ನೀಡಿದರೆ ಸಾಕ್ಷ್ಯಗಳಿಗೆ ಹೆದರಿಸುವ ಸಾಧ್ಯತೆ ಇದೆ. ನ್ಯಾಯಾಂಗ ಬಂಧನದಲ್ಲೂ ಆರೋಪಿಗೆ ಚಿಕಿತ್ಸೆ ಪಡೆಯುವ ಅವಕಾಶ ಇರುವುದರಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದಾಗಿ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...