ಉಡುಪಿ | ನಗರಸಭೆ ನಿಯಮ ಉಲ್ಲಂಘಿಸಿದ್ದಲ್ಲಿ ಪರವಾನಿಗೆ ರದ್ದು

Date:

ನಗರಸಭಾ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರು ಹಾಗೂ ಗೂಡಂಗಡಿಗಳ ಮಾಲೀಕರು ತಮಗೆ ಸೂಚಿಸಿದ ಸೀಮಿತ ವಾಪ್ತಿಯನ್ನು ಹೊರತು ಪಡಿಸಿ ಅನಧಿಕೃತವಾಗಿ ಹೆಚ್ಚುವರಿ ಪ್ರದೇಶವನ್ನು ವಿಸ್ತರಣೆ ಮಾಡಿ ಬಳಸಿಕೊಳ್ಳುವಂತಿಲ್ಲ. ಎಲ್ಲಾ ಗೂಡಂಗಡಿಗಳಲ್ಲಿ ಕಡ್ಡಾಯವಾಗಿ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೂಡಂಗಡಿಗಳು ಸಾರ್ವಜನಿಕರಿಗೆ, ವಾಹನ ಚಾಲಕರಿಗೆ ತೊಂದರೆ ನೀಡುವಂತಿರಬಾರದು, ಫಾಸ್ಟ್ ಫುಡ್ ಅಥವಾ ರಸ್ತೆ ಬದಿಗಳಲ್ಲಿ ಗೂಡಂಗಡಿಗಳ ಮೂಲಕ ಹೋಟೆಲ್ ನಡೆಸುವವರು ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು “ಆಹಾರ ಗುಣಮಟ್ಟತೆ ಮತ್ತು ಸುರಕ್ಷತಾ ಇಲಾಖೆ”ಯಿಂದ ಪರವಾನಿಗೆ ಪಡೆದಿರಬೇಕು ಹಾಗೂ ಯಾವುದೇ ಗೂಡಂಗಡಿಗಳಲ್ಲಿ ತಂಬಾಕು ಮತ್ತು ಇತರ ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ.

ಬೀದಿ ಬದಿಯಲ್ಲಿ ವ್ಯಾಪಾರಸ್ತರು ಹಾಗೂ ಗೂಡಂಗಡಿ ಮಾಲೀಕರು ನಗರಸಭೆ ಸೂಚಿಸಿರುವ ನಿಯಮವನ್ನು ಪಾಲಿಸದೇ ಇದ್ದಲ್ಲಿ ಅಂತಹ ಗೂಡಂಗಡಿ ಮಾಲೀಕರಿಗೆ 5000 ರೂ. ದಂಡ ವಿಧಿಸಿ, ಗೂಡಂಗಡಿಯನ್ನು ತೆರವುಗೊಳಿಸಿ ಪರವಾನಿಗೆ ರದ್ದುಪಡಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...