ಉಡುಪಿ | ನಗರಸಭೆ ವತಿಯಿಂದ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ

Date:

ಉಡುಪಿ ನಗರಸಭಾ ವತಿಯಿಂದ ಪೌರಕಾರ್ಮಿಕರುಗಳಿಗೆ ಮಾಸ್ಟರ್ ಆರೋಗ್ಯ ತಪಾಸಣಾ ಶಿಬಿರವು ಇಂದು ನಗರದ ಸಿಟಿ ಆಸ್ಪತ್ರೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಉದ್ಘಾಟಿಸಿ, ನಗರಸಭೆ ವತಿಯಿಂದ ಆಯೋಜಿಸಿರುವ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ಎಲ್ಲಾ ಪೌರಕಾರ್ಮಿಕರು ಪಡೆದುಕೊಳ್ಳುವುದರೊಂದಿಗೆ ಆರೋಗ್ಯವಂತರಾಗಿ ಗೈರು ಹಾಜರಿ ಇಲ್ಲದೇ ಕರ್ತವ್ಯ ನಿರ್ವಹಿಸಲು ಕರೆ ನೀಡಿದರು.

ಕೊಡವೂರು ವಾರ್ಡ್ನ ನಗರಸಭಾ ಸದಸ್ಯ ವಿಜಯ ಕೊಡವೂರು ಮಾತನಾಡಿ, ಪೌರಕಾರ್ಮಿಕರ ಆರೋಗ್ಯ ದೃಷ್ಟಿಯಿಂದ ಉಡುಪಿ ನಗರಸಭೆಯು ಪೌರಕಾರ್ಮಿಕರ ಮಾಸ್ಟರ್ ಹೆಲ್ತ್ ಚೆಕಪ್ ಅನ್ನು ವ್ಯವಸ್ಥಿತವಾಗಿ ನಡೆಸುತ್ತಾ ಬಂದಿದ್ದು, ನಗರದ ಸ್ವಚ್ಛತಾ ಕಾರ್ಯದ ಹಿತದೃಷ್ಟಿಯ ಜೊತೆಗೆ ಪೌರಕಾರ್ಮಿಕರ ಆರೋಗ್ಯವನ್ನೂ ಸಹ ಪರಿಗಣಿಸಲಾಗಿರುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಟಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೆಂಕಟೇಶ್ ಶಾನುಭಾಗ್ ಮಾಸ್ಟರ್ ಆರೋಗ್ಯ ತಪಾಸಣಾ ಶಿಬಿರದಲ್ಲಿನ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ನಗರಸಭೆಯ ಸದಸ್ಯರುಗಳಾದ ರಶ್ಮಿ ಭಟ್, ಟಿ.ಜಿ ಹೆಗ್ಡೆ, ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಿಶ್ವನಾಥ ಶಾನುಭಾಗ್, ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕರಾದ ಸುರೇಂದ್ರ ಹೋಬಳಿದಾರ್, ಹರೀಶ್ ಬಿಲ್ಲವ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಿರಿಯ ಆರೋಗ್ಯ ನಿರೀಕ್ಷಕ ಪ್ರಕಾಶ್ ಪ್ರಭು ನಿರೂಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...