ನವೆಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಹಿನ್ನಲೆಯಲ್ಲಿ ನಗರದಾದ್ಯಂತ ಅಪಾರ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದಿ ಉಡುಪಿಯ ಹೆಲಿಪ್ಯಾಡ್‌ನಿಂದ ಲ್ಯಾಂಡ್ ಆದ ನಂತರ ಬನ್ನಂಜೆ ಸರ್ಕಲ್‌ನಿಂದ ಕಲ್ಸಂಗ ಸರ್ಕಲ್ ವರೆಗೆ ರೋಡ್ ಶೋ ಆಯೋಜನೆಯಾಗಿದ್ದು, ನಂತರ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಹಾಗೂ ಗೀತಾ ಮಂದಿರದಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ. ಇದರ ಬಳಿಕ ಮಠದ ಎದುರಿನ ಪಾರ್ಕಿಂಗ್ ಪ್ರದೇಶದಲ್ಲಿ ಪ್ರಧಾನಿಯವರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿಯ ಭೇಟಿ ಹಿನ್ನೆಲೆಯಲ್ಲಿ ಸುಮಾರು 3000ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ–ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇವರಲ್ಲಿ 10 ಮಂದಿ ಪೊಲೀಸ್ ಆಯುಕ್ತರು ಸೇರಿದಂತೆ ಎಂಟಕ್ಕೂ ಹೆಚ್ಚು ಜಿಲ್ಲೆಗಳಿಂದ ಪೊಲೀಸ್ ಸಿಬ್ಬಂದಿಗಳನ್ನು ಕರೆಸಲಾಗಿದೆ.
ಭದ್ರತಾ ವ್ಯವಸ್ಥೆಗೆ ಎಸ್‌ಪಿಜಿ ತಂಡ ನೇತೃತ್ವವಹಿಸಿದ್ದು, ತಂಡ ಈಗಾಗಲೇ ಉಡುಪಿಗೆ ಆಗಮಿಸಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಸಿಬ್ಬಂದಿಯೂ ಅವರೊಂದಿಗೆ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟು ಬಂದೋಬಸ್ತ್ ವ್ಯವಸ್ಥೆಯನ್ನು ಎಡಿಜಿಪಿ ಜಿತೇಂಧ್ರ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ, ಐಜಿ ಸಂದೀಪ್ ಪಟೀಲ್ ಮತ್ತು ಐಜಿ ಚಂದ್ರಗುಪ್ತ ಅವರ ನೇತೃತ್ವದಲ್ಲಿ ಜಾರಿಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.





