ಉಡುಪಿ | ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ: ದಲಿತ ವಿದ್ಯಾರ್ಥಿಯನ್ನು ಕೈಬಿಟ್ಟ ಆರೋಪ

Date:

ಪದವಿಪೂರ್ವ ಮಹಾವಿದ್ಯಾಲಯಗಳ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ತಂಡಕ್ಕೆ ಆಯ್ಕೆಯಾಗಿದ್ದ ದಲಿತ ವಿದ್ಯಾರ್ಥಿಯನ್ನು ಕೈಡಲಾಗಿದೆ. ರಾಜಕೀಯ ಪ್ರಭಾವದಿಂದ ದಲಿತ ವಿದ್ಯಾರ್ಥಿಯನ್ನು ತಂಡದಿಂದ ಹೊರಹಾಕಿ ಬೇರೊಬ್ಬ ವಿದ್ಯಾರ್ಥಿಯನ್ನು ಸೇರಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆರೋಪಿಸಿದೆ.

ಉಡುಪಿಯಲ್ಲಿ ಸುದ್ದಿಗೋ‍ಷ್ಠಿ ನಡೆಸಿದ ದಸಂಸ ಮುಖಂಡ ಮಂಜುನಾಥ್ ಗಿಳಿಯಾರ್,‌ ”ಉಡುಪಿ ಜಿಲ್ಲೆಯ ದಲಿತ ವಿದ್ಯಾರ್ಥಿ ಸುಜಿತ್‌ನನ್ನು ತಂಡದಿಂದ ಹೊರಗಿಟ್ಟು, ಜಿಲ್ಲಾಡಳಿತ ದ್ರೋಹ ಮಾಡಿದೆ. ಸುಜಿತ್ ಅವರು ತಾಳಿಕೋಟೆಯಲ್ಲಿ ನಡೆದ ಪಂದ್ಯಾವಳಿಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ತಾಳಿಕೋಟೆಯಲ್ಲಿ ನಡೆದ ಪಂದ್ಯಾಕೂಟದಲ್ಲಿ ಏಳು ಪಂದ್ಯದಲ್ಲಿ ಭಾಗವಹಿಸಿದ್ದ ಸುಜಿತ್, ಫೈನಲ್ ಪಂದ್ಯದ ಸಮಯದಲ್ಲಿ ಕೈಗೆ ಪಟ್ಟಾಗಿ ಆಟದಿಂದ ಹೊರಗುಳಿದಿದ್ದರು. ಬದಲಿ ಆಟಗಾರ ಆಡಿದ್ದು, ಸುಜಿತ್ ಪ್ರತಿನಿಧಿಸಿದ್ದ ತಂಡ ಗೆಲುವು ಸಾಧಿಸಿತ್ತು” ಎಂದು ವಿವರಿಸಿದ್ದಾರೆ.

“ರಾಷ್ಟ್ರ ಮಟ್ಟದ ಪಂದ್ಯಕೂಟಕ್ಕೆ ರಾಜ್ಯ ಮಟ್ಟದಲ್ಲಿ ಗೆದ್ದ ತಂಡದ ಅರು ಆಟಗಾರರು ಇರಬೇಕೆಂದು ನಿಮಯಗಳು ಹೇಳುತ್ತಿವೆ. ಎಲ್ಲ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆರು ಮಂದಿಯನ್ನು ಗೆದ್ದ ತಂಡದಿಂದ ಆರಿಸಲಾಗುತ್ತದೆ. ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯ ಆಯ್ಕೆ ಪಟ್ಟಿಯಲ್ಲಿ ಸುಜಿತ್ ಹೆಸರು ಇತ್ತು. ಆದರೆ, ಈಗ ರಾಜಕೀಯ ಪ್ರಭಾವದಿಂದ ಬೇರೊಬ್ಬನನ್ನು ಆಯ್ಕೆ ಮಾಡಿ, ಸುಜಿತ್ ಹೆಸರು ಕೈಬಿಡಲಾಗಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 33

“ಡಿಸೆಂಬರ್ 22ರಂದು ರಾಷ್ಟ್ರ ಮಟ್ಟದ ಪಂದ್ಯಾಕೂಟ ತೆಲಂಗಾಣದಲ್ಲಿ ನಡೆಯಲಿದೆ. ಆದಷ್ಟು ಶೀಘ್ರವೇ ಸಂಬಂಧ ಪಟ್ಟ ಇಲಾಖೆಯನ್ನು ಸಂಪರ್ಕಿಸಿ ವಿದ್ಯಾರ್ಥಿಗೆ ನ್ಯಾಯ ಕೊಡಿಸಲು ಪ್ರಯತ್ನಿಸುತ್ತೇವೆ” ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ದಸಂಸ ಮುಖಂಡ ಸುಂದರ್ ಮಾಸ್ತರ್, ಶ್ಯಾಮ್’ರಾಜ್ ಬಿರ್ತಿ, ಅಣ್ಣಪ್ಪ ನಕ್ರೆ,ಶ್ರೀಧರ್ ಬೈಲೂರು, ಸುಜಿತ್ ಬೈಲೂರು, ಶಿವನಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...