ಉಡುಪಿ | ನಾಳೆ ನೀಟ್ – ಯುಜಿ ಪರೀಕ್ಷೆ, ಜಿಲೆಯಲ್ಲಿ 2947 ಅಭ್ಯರ್ಥಿಗಳು

Date:

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ನೀಟ್ – ಯು.ಜಿ 2025 ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಒಂದು ಪಾಳಿಯಲ್ಲಿ ಜಿಲ್ಲೆಯ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯ ಒಟ್ಟು 2947 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪರೀಕ್ಷಾ ದಿನದಂದು ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1.30 ರ ಒಳಗಾಗಿ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಮೊಬೈಲ್, ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ ಡ್ರೈ ವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರೀಕ್ಷಾ ಕೇಂದ್ರದಲ್ಲಿಯೇ ಕಲ್ಪಿಸಲಾಗಿದ್ದು, ಕುಡಿಯುವ ನೀರಿನ ಬಾಟಲ್ ಅನ್ನು ಸಹ ತೆಗೆದುಕೊಂಡು ಹೋಗುವಂತಿಲ್ಲ.
ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ಗಳು ಮತ್ತು ಲಾಗ್ ಟೇಬಲ್‌ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ಅಭ್ಯರ್ಥಿಗಳಿಗೆ ಪೆನ್‌ಗಳನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದಲೇ ನೀಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಎರಡು ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಒಂದು ಪೋಸ್ಟ್ ಕಾರ್ಡ್ ಸೈಜ್ ಭಾವಚಿತ್ರ ಕಡ್ಡಾಯವಾಗಿ ತರಬೇಕು. ವಸ್ತçಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಪೂರ್ಣ ತೋಳಿನ ಉಡುಪನ್ನು ಧರಿಸುವಂತಿಲ್ಲ.

ಪಿ.ಡಬ್ಲೂಡಿ ಅಭ್ಯರ್ಥಿಗಳಿಗೆ ಹೆಚ್ಚುವರಿ 1 ಗಂಟೆ ಅಂದರೆ ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆಯ ವರೆಗೆ ಪರೀಕ್ಷೆ ಬರೆಯಲು ಕಾಲಾವಕಾಶ ನೀಡಲಾಗಿರುತ್ತದೆ ಹಾಗೂ ಪರೀಕ್ಷಾ ಕೇಂದ್ರದಲ್ಲಿ ವ್ಹೀಲ್ ಚೇರ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿರುತ್ತದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ದೊಡ್ಡ ವಾಲ್ ಗಡಿಯಾರವನ್ನು ಅಳವಡಿಸಲಾಗುವುದು. ಪರೀಕ್ಷೆ ಪ್ರಾರಂಭವಾದ ಪ್ರತೀ ಮೂವತ್ತು ನಿಮಿಷಕ್ಕೊಮ್ಮೆ ಬೆಲ್ ಬಾರಿಸಲಾಗುವುದು.

ಅಭ್ಯರ್ಥಿಗಳು ಪರೀಕ್ಷೆ ಮುಕ್ತಾಯವಾದ ನಂತರ ಬುಕ್‌ಲೆಟ್ ಮತ್ತು ಪೆನ್‌ನೊಂದಿಗೆ ಪರೀಕ್ಷಾ ಕೇಂದ್ರದಿAದ ಹಿಂದಿರುಗಬೇಕು. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಆಂಬುಲೆನ್ಸ್ನೊಂದಿಗೆ ವೈದ್ಯಕೀಯ ಸಿಬ್ಬಂದಿಯನ್ನು ಪರೀಕ್ಷಾ ಕೇಂದ್ರಗಳಿಗೆ ನೀಯೋಜಿಸಲಾಗುವುದು.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ನಿಗಧಿಪಡಿಸಿರುವ ಸೂಚನೆಗಳನ್ನು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ನಿಷೇಧಾಜ್ಞೆ ಜಾರಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ಮೇ 4 ರಂದು ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ನೀಟ್ –ಯು.ಜಿ 2025 ರ ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...