ಉಡುಪಿ | ನೇಜಾರು ಹತ್ಯಾಕಾಂಡ; ತ್ವರಿತವಾಗಿ ವಿಚಾರಣೆ ನಡೆಸಲು ಮನವಿ

Date:

ಇತ್ತೀಚಿಗೆ ಉಡುಪಿಯ ನೇಜಾರಿನಲ್ಲಿ ನಡೆಸ ನಾಲ್ವರ ಭೀಕರ ಹತ್ಯೆಗೆ ಸಂಬಂಧಿಸಿದಂತೆ, ಇಂದು (ನ.29) ಮುಸ್ಲಿಮ್ ಬಾಂಧವ್ಯ ವೇದಿಕೆ ತಂಡ ನೇಜಾರು ಹತ್ಯಾಕಾಂಡ ಪ್ರಕರಣವನ್ನು ತ್ವರಿತವಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ಕಾನೂನು ಸಚಿವರಿಗೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರ ಮೂಲಕ ಮನವಿ ಸಲ್ಲಿಸಿದರು.

ಜೊತೆಗೆ ಉಡುಪಿ ಪೋಲಿಸ್ ವರಿಷ್ಠಾಧಿಕಾರಿ ಡಾ.‌ಅರುಣ್ ಕುಮಾರ್ ರವರನ್ನು ಭೇಟಿಯಾಗಿ ನೇಜಾರು ಹತ್ಯಾಕಾಂಡ ಪ್ರಕರಣದಲ್ಲಿ ಹಂತಕನನ್ನು ಶೀಘ್ರ ಬಂಧಿಸಿದ್ದಕ್ಕಾಗಿ ಪ್ರಶಂಸನಾ ಪತ್ರ ನೀಡಿದರು. ನಂತರ ಹೈಕಾಡಿಯಲ್ಲಿರಯವ ಸಂತ್ರಸ್ತ ನೂರ್ ಮುಹಮ್ಮದ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಸ್ಲಿಮ್ ಬಾಂಧವ್ಯ ವೇದಿಕೆ ರಾಜ್ಯ ಉಪಾಧ್ಯಕ್ಷ ಎಸ್.ಬಿ.‌ ದಾರಿಮಿ, ನೇಜಾರಿನ ನಾಲ್ವರ ಹತ್ಯೆ ಪ್ರಕರಣ ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ. ಇಂತಹ ಪ್ರಕರಣಗಳು ಮರುಕಳಿಸದಿರುವಂತೆ ಆರೋಪಿಗೆ ಶೀಘ್ರವಾಗಿ ಶಿಕ್ಷೆ ಕೊಡುವಂತೆ ಮತ್ತು ತ್ವರಿತಗತಿಯಲ್ಲಿ ವಿಚಾರಣೆ ಮುಗಿಸುಂತೆ ಜಿಲ್ಲಾಧಿಕಾರಿ ಮುಖಾಂತರ ಕಾನೂನು ಸಚಿವರಿಗೆ ಮನವಿಯನ್ನು ಸಲ್ಲಿಸಿದ್ದೇವೆ. ಕುಟುಂಬದ ಸದಸ್ಯರಿಗೆ ದೇವನ ಸಹನೆಯನ್ನು‌ ದಯಾಪಾಲಿಸಲಿ ಎಂದ ಅವರು ಮೃತರಿಗಾಗಿ ಈ‌ ಸಂದರ್ಭದಲ್ಲಿ ಪ್ರಾರ್ಥಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮೌಲಾನ ಶೇಕ್ ಮುಹಮ್ಮದ್ ಇರ್ಫಾನಿ, ಮೌಲಾನ ಹುಸೇನ್ ದಾರಿಮಿ ಮತ್ತು ಮುಷ್ತಾಕ್ ಹೊನ್ನಾಬೈಲ್ ಸಾಂದರ್ಭಿಕವಾಗಿ ಮಾತನಾಡಿದರು. ಮುಸ್ಲಿಮ್ ಬಾಂಧವ್ಯ ವೇದಿಕೆಯ ಅಸ್ಲಮ್ ಹೈಕಾಡಿ, ಶೇಕ್ ನಝೀರ್ ಬೆಳ್ವೆ, ಇಬ್ರಾಹಿಂ ಕೊಟ, ಮೌಲಾನ ರಶೀದ್ ಮುಂತಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...