ಉಡುಪಿ | ಮೃತರ ಸಂಬಂಧಿಕರ ಪತ್ತೆ, ಮೃತಪಟ್ಟವರು ಕೃಷ್ಣ ಅಲ್ಲ, ಸಯ್ಯದ್ !

Date:

ಕಳೆದ ಒಂದೂವರೆ ತಿಂಗಳ ಹಿಂದೆ ರಸ್ತೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅಪರಿಚಿತ ಹಿರಿಯ ವ್ಯಕ್ತಿಯನ್ನು ವಿಶು ಶೆಟ್ಟಿಯವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಸುಮಾರು ಒಂದು ತಿಂಗಳ ಚಿಕಿತ್ಸೆಗೂ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ. ಇದೀಗ ಸಂಬಂಧಿಕರು ಪತ್ತೆಯಾಗಿದ್ದು, ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.

ರಕ್ಷಣೆಯ ಸಮಯದಲ್ಲಿ ವೃದ್ದರು ತಮ್ಮ ಹೆಸರು ಕೃಷ್ಣ, ಗುರುವಾಯನಕೆರೆ ಎಂದು ಮಾತ್ರ ತಿಳಿಸಿದ್ದರು. ಚಿಕಿತ್ಸೆಯ ಅವಧಿಯಲ್ಲಿ ಮತ್ತು ಮೃತರಾದ ನಂತರ ಸಂಬಂಧಿಕರ ಪತ್ತೆಗಾಗಿ ಮಾದ್ಯಮಗಳ ಮೂಲಕ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ನೀಡಲಾಗಿತ್ತು. ಬಳಿಕ ಬಂದ ಸಂಬಂಧಿಕರು ಮೃತರು ಮುಸ್ಲಿಂ ಸಮುದಾಯದವರಾಗಿದ್ದು, ಅವರ ನಿಜವಾದ ಹೆಸರು ಸಯ್ಯದ್ ಎಂದು ಖಚಿತಪಡಿಸಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಯ ಕಾರಣದಿಂದ ವೃದ್ದರು ಹೆಸರು ತಪ್ಪಾಗಿ ಹೇಳಿರುವುದು ಸ್ಪಷ್ಟವಾಗಿದೆ. ಆದರೆ ಅವರ ಮೂಲ ಊರು ಗುರುವಾಯನಕೆರೆ ಎಂಬ ಮಾಹಿತಿ ಸರಿಯೇ ಆಗಿದೆ. ಸಂಬಂಧಿಕರು ದಾಖಲೆ-ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಮೃತದೇಹವನ್ನು ಸ್ವೀಕರಿಸಿ ಅಂತ್ಯಸಂಸ್ಕಾರ ನಡೆಸಿದರು.

WhatsApp Image 2025 11 25 at 8.29.56 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...