ಉಡುಪಿ | ನಡುರಾತ್ರಿ ಕಾರ್ಮಿಕನ ಮೇಲೆ ಹಲ್ಲೆ; ಆರೋಪಿ ಬಂಧನ

Date:

ಭಾನುವಾರ ನಡುರಾತ್ರಿ ತಂದೆ ಹಾಗೂ ಅಪ್ರಾಪ್ತ ಮಗಳು ಮಲಗಿರುವ ಸಮಯದಲ್ಲಿ ದುಷ್ಕರ್ಮಿಯೋರ್ವ ತಂದೆಗೆ ತೀವ್ರವಾಗಿ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ.

ಹಲ್ಲೆಗೊಳಗಾಗಿ ರಕ್ತಸ್ರಾವವಾಗುತ್ತಿದ್ದ ವ್ಯಕ್ತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ, ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಕೂಲಿ ಕಾರ್ಮಿಕರ ಕರಬಸಪ್ಪ(43) ಹಲ್ಲೆಗೊಳಗಾದ ವ್ಯಕ್ತಿ. ಕಾರ್ಮಿಕ ಕುಮಾರ್ ಹಲ್ಲೆ ನಡೆಸಿದ ದುಷ್ಕರ್ಮಿ. ತಂದೆ ಮಗಳು ಮಲಗಿರುವ ಸಮಯ ನಡುರಾತ್ರಿ ಕತ್ತಿ ಹಿಡಿದು ಬಂದ ಕುಮಾರ್ ಮಲಗಿದಲ್ಲಿಯೇ ಹಲ್ಲೆ ನಡೆಸಿದ್ದಾನೆ. ಎಚ್ಚರಗೊಂಡ ಮಗಳು ಬೊಬ್ಬೆ ಹಾಕಿದ್ದು ಸ್ಥಳೀಯರು ಆಗಮಿಸಿ ವಿಶು ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾರೆ. ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಧುಗಿರಿ | ಮೀನು ಹಿಡಿಯಲು ಹೋಗಿ ವ್ಯಕ್ತಿ ನೀರು ಪಾಲು

ಪೆಟ್ಟು ಸ್ವಲ್ಪ ಕೆಳಗೆ ಬಿದ್ದಿದ್ದರೆ ವ್ಯಕ್ತಿ ಪ್ರಾಣಕ್ಕೆ ಕುತ್ತು ಬರುತ್ತಿತ್ತು. ಕೂಡಲೇ ವಿಶು ಶೆಟ್ಟಿ ತನ್ನ ವಾಹನದಲ್ಲಿ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆಯಂತೆ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಪ್ರಕರಣದ ಬಗ್ಗೆ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿ ಕುಮಾರನನ್ನು ಬಂಧಿಸಿ ಹಲ್ಲೆ ಮಾಡಿದ ಕತ್ತಿಯನ್ನು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...