ಉಡುಪಿ | ಮನೆ ಬಿಟ್ಟು ಬಂದ ಅಪ್ರಾಪ್ತ ಬಾಲಕಿಯ ರಕ್ಷಣೆ

Date:

ಅಸಹಾಯಕ ಸ್ಥಿತಿಯಲ್ಲಿ ಸಂಚರಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ರಕ್ಷಿಸಲಾಗಿದೆ.

ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಾರ್ಥವಾಗಿ ತೆರಳಿದ್ದ ಆದಿ ಉಡುಪಿಯ ಪ್ರೇಮ ರಾಮಚಂದ್ರ ಅವರಿಗೆ ಬಾಲಕಿ ಅನುಮಾನಾಸ್ಪದವಾಗಿ ಕಾಣಿಸಿಕೊಂಡಿದ್ದಾಳೆ. ಬಾಲಕಿಯ ಚಲನವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಆಕೆ ಮನನೊಂದು ಮನೆ ಬಿಟ್ಟು ಬಂದಿರುವುದಾಗಿ ತಿಳಿದುಬಂದಿದೆ. ತಕ್ಷಣ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ನಿತ್ಯಾನಂದ ಒಳಕಾಡುವರು ಕೂಡಲೇ ಸ್ಥಳಕ್ಕೆ ಧಾವಿಸಿ ಉಡುಪಿ ನಗರ ಪೊಲೀಸ್ ಠಾಣೆಗೆ ವಿಷಯವನ್ನು ತಿಳಿಸಿದರು. ನಂತರ ಬಾಲಕಿಯನ್ನು ದೊಡ್ಡಣಗುಡ್ಡೆಯ ಬಾಲಕೀಯರ ಬಾಲ ಮಂದಿರಕ್ಕೆ ಕಳುಹಿಸಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲಾಯಿತು. ಈ ಕಾರ್ಯಾಚರಣೆಗೆ ಹರೀಶ್ ಪೂಜಾರಿ ಉದ್ಯಾವರ ಅವರು ಸಹಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮುನ್ನ ಬಾಲಕಿ ನಾಪತ್ತೆಯಾಗಿರುವ ಕುರಿತು ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಾಲಕಿ ಉಡುಪಿಯಲ್ಲಿ ಪತ್ತೆಯಾಗಿರುವ ಮಾಹಿತಿ ತಿಳಿದು, ಹಳೇಬೀಡು ಪೊಲೀಸರು ಬಾಲಕಿಯ ತಾಯಿಯೊಂದಿಗೆ ಸ್ಥಳಕ್ಕೆ ಆಗಮಿಸಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಬಾಲಕಿಯನ್ನು ಹಳೇಬೀಡು ಪೊಲೀಸರಿಗೆ ಒಪ್ಪಿಸಿದರು.

ಆದರೆ ತಾಯಿಯೊಂದಿಗೆ ತೆರಳಲು ಬಾಲಕಿ ನಿರಾಕರಿಸಿದ ಹಿನ್ನೆಲೆಯಲ್ಲಿ, ಆಕೆಗೆ ಚಿಕ್ಕಮಗಳೂರು ಬಾಲಕೀಯರ ಬಾಲ ಮಂದಿರದಲ್ಲಿ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...