ಉಡುಪಿ | ಅತಿಯಾದ ಮದ್ಯ ಸೇವಿಸಿ ತನ್ನದೇ ಮನೆಗೆ ಬೆಂಕಿಯಿಟ್ಟ ಕುಡುಕ

Date:

ಅತಿಯಾದ ಮದ್ಯ ಸೇವನೆಯಿಂದ ಅಮಲೇರಿದ ಕುಡುಕನೊಬ್ಬ, ತ‌ನ್ನದೇ ಮನೆಗೆ ಬೆಂಕಿ‌ ಹಿಡಿಸಿರುವ ಘಟನೆಯು ಉಡುಪಿ ನಗರದ ಹೊರವಲಯದ ಚಿಟ್ಪಾಡಿಯಲ್ಲಿ ಭಾನುವಾರ ನಡೆದಿದೆ.

ಕುಡುಕನ ರಂಪಾಟ, ಉಗ್ರ ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ‌ ಒಳಕಾಡುವರಲ್ಲಿ ನೆರವಿಗೆ ಬರುವಂತೆ ಹೇಳಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಒಳಕಾಡುವರು ಅಗ್ನಿಶಾಮಕ ದಳದವರಿಗೆ ವಿಷಯ ಮುಟ್ಟಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅಗ್ನಿದುರಂತವನ್ನು ತಪ್ಪಿಸಿದ್ದಾರೆ. ಬಳಿಕ ಒಳಕಾಡುರವರು ಕುಡುಕನ‌‌ ಮೊನವೊಲಿಸಿ ಮದ್ಯವರ್ಜನ‌ ಕೇಂದ್ರಕ್ಕೆ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...