ಉಡುಪಿ ನಾರ್ಥ್ ಶಾಲೆಯಲ್ಲಿ ವಿಶ್ವ ಶ್ರವಣ ದಿನ ಆಚರಣೆ; 85 ಮಕ್ಕಳಿಗೆ ಕಿವಿ ತಪಾಸಣೆ

Date:

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಉಡುಪಿ, ಕೆ.ಎಂ.ಸಿ ಮಣಿಪಾಲ ಶ್ರವಣ ವಿಭಾಗ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಡುಪಿ ನಾರ್ಥ್ ಇವರ ಜಂಟಿ ಆಶ್ರಯದಲ್ಲಿ ಮಂಗಳವಾರ ಉಡುಪಿ ನಾರ್ಥ್ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶ್ರವಣ ದಿನವನ್ನು ಆಚರಿಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ “ಸಮುದಾಯದಿಂದ ಹಿಡಿದು ತರಗತಿ ಕೋಣೆಯ ವರೆಗೆ ಎಲ್ಲಾ ಮಕ್ಕಳಿಗಾಗಿ ಶ್ರವಣದ ಕಾಳಜಿ” ಥೀಮ್ ವಿಷಯವಾಗಿ ಮಾತನಾಡಿ, ಮಕ್ಕಳಲ್ಲಿ ಕಂಡುಬರುವ ತಡೆಗಟ್ಟಬಹುದಾದ ಶ್ರವಣ ನಷ್ಟವನ್ನು ಕಡಿಮೆ ಮಾಡಿ ಅವರ ಅರಿವಿನ ಸಾಮರ್ಥ್ಯವನ್ನು ಹೆಚ್ಚಿಸುವುದು ಮತ್ತು ಸಾಮಾಜಿಕವಾಗಿ ಎಲ್ಲರೊಡನೆ ಬೆರೆಯುವಂತೆ ಮಾಡುವುದೇ ಇಂದಿನ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ತಿಳಿಸಿದರು.

ಶ್ರವಣ ತಜ್ಞೆ ಸಮೀಕ್ಷಾ ಡಿ ರಾವ್ ಮಾತನಾಡಿ, ಮಗು ಸರಿಯಾಗಿ ಮಾತನಾಡ ಬೇಕೆಂದರೆ ಮಗುವಿಗೆ ಕೇಳುವಿಕೆ ತುಂಬಾ ಮುಖ್ಯ. ಮಕ್ಕಳು ಕಿವಿಗೆ ಕಡ್ಡಿ ಅಥವಾ ಚೂಪಾದ ವಸ್ತುವನ್ನು ಹಾಕದಂತೆ ಪೋಷಕರು ಕಾಳಜಹಿ ವಹಿಸಬೇಕು. ಕಿವಿಯಲ್ಲಿ ಸಹಜ ಸ್ವಚ್ಛಗೊಳಿಸುವ ಕಾರ್ಯ ವಿಧಾನವಿರುವುದರಿಂದ ಕಡ್ಡಿಯಿಂದ ಕಿವಿಯನ್ನು ಸ್ವಚ್ಛ ಮಾಡಬಾರದು. ಸೀಳು ತುಟಿ ಮತ್ತು ಸೀಳು ಅಂಗುಳ ಇರುವ ಮಕ್ಕಳಿಗೆ ಸರಿಯಾದ ಸಮಯದಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಬೇಕು. ಕಿವಿನೋವು, ಕಿವಿಯಲ್ಲಿ ಕೀವು, ತುರಿಕೆ ಇದ್ದಲ್ಲಿ ತಕ್ಷಣವೇ ಕಿವಿ ಮೂಗು ಗಂಟಲು ವೈದ್ಯರನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ದಡಾರ, ರುಬೆಲ್ಲಾ ಲಸಿಕೆಯನ್ನು ಸರಿಯಾದ ಸಮಯದಲ್ಲಿ ತೆಗೆದು ಕೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಬಸಪ್ಪ ಬೆನ್ನಪ್ಪನವರ್, ಕೆ.ಎಂ.ಸಿ ಮಣಿಪಾಲ ಶ್ರವಣ ವಿಭಾಗದ ದಿಯಾ, ಆಂಡ್ರಿವ್, ಸಹಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಕೆ ಸ್ವಾಗತಿಸಿ, ಸಹಶಿಕ್ಷಕ ಗುರು ಪ್ರಸಾದ್ ವಂದಿಸಿದರು. ನಾರ್ಥ್ ಶಾಲೆಯ 85 ಮಕ್ಕಳಿಗೆ ಕಿವಿಯ ತಪಾಸಣೆ ನಡೆಸಿ, ಸೂಕ್ತ ಸಲಹೆ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...