ಉಡುಪಿ | ಆನ್ ಲೈನ್ ಟ್ರೇಡಿಂಗ್ ಹೆಸರಲ್ಲಿ ₹44 ಲಕ್ಷ ವಂಚನೆ; ಇಬ್ಬರು ಆರೋಪಿಗಳ ಬಂಧನ

Date:

ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಲಾಭ ಮಾಡುವ ಆಮಿಷವೊಡ್ಡಿ ಸುಮಾರು ₹44 ಲಕ್ಷ ವಂಚಿಸಿರುವ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಈ ಕುರಿತು ಉಡುಪಿಯ ಶಿವಳ್ಳಿ ಗ್ರಾಮದ ತೀರ್ಥರಾಜ ಶೆಣೈ(51) ಎಂಬುವವರು ಸೆನ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ “Capital Gains Crew ಎಂಬ ಟೆಲಿಗ್ರಾಂ ಗ್ರೂಪ್ ಗೆ Adi Nihal ಎಂಬ ಅಪರಿಚಿತ ವ್ಯಕ್ತಿ ಸೇರ್ಪಡೆ ತೀರ್ಥರಾಜ ಅವರನ್ನು ಸೇರಿಸಿದ್ದಾನೆ. ಬಳಿಕ Fidility Institutional Partners F – 101 ಗ್ರೂಪ್‌ ಗೆ ಸೇರಿಸಿದ್ದು, ಈ ಗ್ರೂಪ್‌ನಲ್ಲಿ ಷೇರು ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದಾರೆ. ಬಳಿಕ ತೀರ್ಥರಾಜ ಅವರು ತಮ್ಮ ಮತ್ತು ಅವರ ತಾಯಿಯ ಬ್ಯಾಂಕ್‌ ಖಾತೆಯಿಂದ 2024ರ ಡಿಸೆಂಬರ್‌ 19 ರಿಂದ 2025ರ ಜನವರಿ 7 ರವರೆಗೆ ಅಪರಿಚಿತರು ಸೂಚಿಸಿದ ವಿವಿಧ ಖಾತೆಗಳಿಗೆ ಒಟ್ಟು ₹44 ಲಕ್ಷ ಹಣವನ್ನು ಹೂಡಿಕೆ ಮಾಡಿದ್ದಾರೆ. ದೂರುದಾರರು ಹೂಡಿಕೆ ಮಾಡಿದ ಹಣವನ್ನಾಗಲೀ ಅಥವಾ ಲಾಭಾಂಶವನ್ನಾಗಲಿ ನೀಡದೇ ವಂಚಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್‌ ಶಂಕರ್‌ ಆದೇಶದಂತೆ ಹಾಗೂ ಹೆಚ್ಚುವರಿ ಪೊಲೀಸ್‌‌‌‌ ಅಧೀಕ್ಷಕ ಸುಧಾಕರ ನಾಯಕ್‌ ಮತ್ತು ಸಹಾಯಕ ಪೊಲೀಸ್‌ ಉಪಾಧೀಕ್ಷಕ ಡಾ. ಹರ್ಷ ಪ್ರಿಯಂವದ ಅವರ ನಿರ್ದೇಶನ ಮೇರೆಗೆ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ರಚಿಸಿದ ವಿಶೇಷ ತಂಡವು ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳನ್ನು ಮೈಸೂರಿನ ಶೋಯಬ್‌ ಅಹಮದ್‌ (28) ಹಾಗೂ ಮುದ್ದಾಸಿರ್‌ ಅಹಮದ್‌ (40)ನನ್ನು ಬಂಧಿಸಲಾಗಿದ್ದು, ಬಂಧಿತರಿಂದ ಪ್ರಕರಣಕ್ಕೆ ಸಂಬಂಧಿಸಿದ ₹2 ಲಕ್ಷ ನಗದು ಹಾಗೂ ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...