ಉಡುಪಿ | ಕಲುಷಿತಗೊಂಡ ಟ್ಯಾಂಕ್‌ನ ಕುಡಿಯುವ ನೀರು: ನೂರಕ್ಕೂ ಅಧಿಕ ಮಂದಿ ಗ್ರಾಮಸ್ಥರು ಅಸ್ವಸ್ಥ

Date:

ಕುಡಿಯುವ ನೀರಿನ ಟ್ಯಾಂಕ್ ಕಲುಷಿತಗೊಂಡಿದ್ದು, ಇದನ್ನು ಸೇವಿಸಿದ ಬಳಿಕ ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ನಡೆದಿದೆ.

ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಮತ್ತು 7ನೇ ವಾರ್ಡ್ ನಲ್ಲಿ ಕುಡಿಯುವ ನೀರು ಕಲುಷಿತಗೊಂಡಿದೆ. ಈ ಬಗ್ಗೆ ಅರಿಯದೆ ನೀರು ಸೇವಿಸಿದ್ದ ಗ್ರಾಮಸ್ಥರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಕರ್ಕಿ ಕಳ್ಳಿ ಮತ್ತು ಮಡಿಕಲ್ ಎನ್ನುವ ಪ್ರದೇಶದಲ್ಲಿನ ಗ್ರಾಮಸ್ಥರು ಸಂಪೂರ್ಣ ಅಸ್ವಸ್ಥರಾಗಿದ್ದಾರೆ. ಕಾಸಿನಾಡಿ ಎಂಬಲ್ಲಿರುವ ನೀರಿನ ಟ್ಯಾಂಕ್‌ನಿಂದ ಬಂದ ನೀರು ಕುಡಿದು ಅಸ್ವಸ್ಥರಾಗಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ಕಿಕಳಿಯಲ್ಲಿ ಹಾಗೂ ಮಡಿಕಲ್‌ ಎಂಬಲ್ಲಿನ ಸುಮಾರು 150ಕ್ಕೂ ಅಧಿಕ ಗ್ರಾಮಸ್ಥರು ಅಸ್ವಸ್ಥರಾಗಿದ್ದು, ವಾರ್ಡ್‌ನ ಪ್ರತಿ ಮನೆಯಲ್ಲೂ ಮೂರಕ್ಕೂ ಅಧಿಕ ಮಂದಿಗೆ ವಾಂತಿ, ಭೇದಿ ಕಾಣಿಸಿಕೊಂಡಿರುವುದಾಗಿ ತಿಳಿದುಬಂದಿದೆ.

80 ವರ್ಷದ ವಯೋವೃದ್ಧರಿಗೆ ರಕ್ತಭೇದಿಯಾಗಿ, ಗಂಭೀರಗೊಂಡಿದ್ದು, ಅವರನ್ನು ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕಿದ್ದಾರೆ. “ಟ್ಯಾಂಕ್‌ನಲ್ಲಿದ್ದ ನೀರು ಅಶುದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಗ್ರಾಮದ ಜನರ ಅಸ್ವಸ್ಥರಾಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಗ್ರಾಮಸ್ಥರು ಅಧಿಕಾರಿಗಳೊಂದಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಸಿನಾಡಿ ಓವರ್ ಹೆಡ್ ನೀರಿನ ಟ್ಯಾಂಕ್ ನೀರು ಸರಬರಾಜು ಬಂದ್ ಮಾಡಬೇಕು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆಯೂ ಸ್ಥಳೀಯರು ಆಗ್ರಹಿಸಿದ್ದಾರೆ.

jih
1 20
udp
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...