ಉಡುಪಿ | ತನ್ನದೇ ಬಸ್ಸಿನಡಿ ಸಿಲುಕಿ ಮಾಲೀಕ ಸಾವು

Date:

ತನ್ನದೇ ಮಾಲೀಕತ್ವದ ಬಸ್‌ ಕೆಳಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.

ಮಣಿಪಾಲದ ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯಲ್ಲಿ ಮಾಂಡವಿ ಸಂಸ್ಥೆ ಸುಮಾರು ವರ್ಷಗಳಿಂದ ಬಸ್‌ ಸೇವೆ ನೀಡುತ್ತಿದ್ದು, ಇತ್ತೀಚಿಗೆ ಒಂದು ಬಸ್‌ ಕೆಟ್ಟು ನಿಂತಿತ್ತು. ಈ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ಬಸ್‌ವೊಂದನ್ನು ಮಣಿಪಾಲದ ಬಡಗಬೆಟ್ಟುವಿನ ಗ್ಯಾರೇಜ್‌ವೊಂದಕ್ಕೆ ರಿಪೇರಿಗೆ ಬಿಟ್ಟಿದ್ದರು. ಬಸ್‌ ರಿಪೇರಿಗೆ ನೀಡಿ ದಿನ ಕಳೆದ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ಮಾರ್ಚ್ 13ರಂದು ಬಸ್‌ ನೋಡಲೆಂದು ಗ್ಯಾರೇಜ್‌ಗೆ ತೆರಳಿದ್ದರು. ಈ ವೇಳೆ ಚಾಲಕ ಏಕಾಏಕಿ ಬಸ್‌ ಚಲಾಯಿಸಿದ್ದರಿಂದ ಬಸ್‌ ಎದುರು ನಿಂತಿದ್ದ ದಯಾನಂದ ಶೆಟ್ಟಿ ಬಸ್ ಚಕ್ರದಡಿಗೆ ಸಿಲುಕಿದ್ದಾರೆಂಬ ಆರೋಪ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಬಿರು ಬೇಸಿಗೆಗೆ ಜನ ಕಂಗಾಲು; ಕೊಡಗಿನಲ್ಲಿ ಮಳೆಯ ಸಿಂಚನ

ದುರ್ಘಟನೆ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿದ್ದವರು ಕೂಡಲೇ ಬಸ್‌ ಚಕ್ರದ ಕೆಳಗೆ ಸಿಲುಕಿದ್ದ, ದಯಾನಂದ ಶೆಟ್ಟಿ ಅವರನ್ನು ಹೊರ ತೆಗೆದಿದ್ದಾರೆ. ಬಳಿಕ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಯಾನಂದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.  ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದ ಕಾರಣ ದಯಾನಂದ ಶೆಟ್ಟಿ ಮಣಿಪಾಲ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...