ಉಡುಪಿ | ಅಕ್ರಮವಾಗಿ ಸಿಡಿಮದ್ದು ಸಂಗ್ರಹ, ಪೊಲೀಸರಿಂದ ದಾಳಿ

Date:

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಾಗೂ ಅಪಾಯಕಾರಿಯಾಗಿ ಪಟಾಕಿಗಳನ್ನು ಸಂಗ್ರಹಿಸಿ ಮಾರಾಟಕ್ಕೆ ಇಟ್ಟುಕೊಂಡಿರುವ ಬಗ್ಗೆ ಬಂದಿದ್ದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಕಳ, ಬ್ರಹ್ಮಾವರ ಹಾಗೂ ಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಮಿಯಾ‌ರ್, ಕುಂಜಾಲು ಮತ್ತು ತೆಕ್ಕಟ್ಟೆ ಪ್ರದೇಶಗಳಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ದೊಡ್ಡ ಪ್ರಮಾಣದ ಸಿಡಿಮದ್ದುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸಿಡಿಮದ್ದುಗಳನ್ನು ಅಧಿಕೃತ ಸ್ಫೋಟಕ ಸಂಗ್ರಹಾಗಾರ (Explosives Magazine) ಪ್ರದೇಶಗಳಿಗೆ ಸ್ಥಳಾಂತರಿಸಿ ನಂತರ ನಿಯಮಾನುಸಾರ ನಾಶಪಡಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಈ ಕುರಿತು Explosives Act 9B(1)(b) BNS 287, 288 ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಅಕ್ರಮ ಸಿಡಿಮದ್ದು ಸಂಗ್ರಹಣೆ ಮತ್ತು ಖರೀದಿ ಕುರಿತು ತನಿಖೆ ಮುಂದುವರಿದಿದೆ.

1007707545
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...