ಉಡುಪಿ | ವಕ್ಫ್ ವಿರುದ್ಧ ರಾಜಕೀಯ ಪ್ರೇರಿತ ಆರೋಪ: ಮುಸ್ಲಿಂ ಬಾಂಧವ್ಯ ವೇದಿಕೆಯ ಮುಖಂಡ ಮುಷ್ತಾಕ್ ಹೆನ್ನಾಬೈಲ್

Date:

ವಕ್ಫ್ ಆಸ್ತಿಯ ವಿಚಾರದಲ್ಲಿ ವಿಲಕ್ಷಣ ಸಿದ್ಧಾಂತವನ್ನು ಮಂಡಿಸಿ, ಹಿಂದೂ- ಮುಸ್ಲಿಮರ ನಡುವೆ ವೈಮನಸ್ಸು ಮೂಡಿಸಿ, ಸೌಹಾರ್ದಭರಿತ ವಾತಾವರಣವನ್ನು ಕಲುಷಿತಗೊಳಿಸಿ, ನಾಡಿನ ಸಾಮರಸ್ಯವನ್ನು ಹದಗೆಡಿಸುವ ದೊಡ್ಡ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿದೆ ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವಕ್ತಾರ ಮುಷ್ತಾಕ್ ಹೆನ್ನಾಬೈಲ್ ಹೇಳಿದ್ದಾರೆ.

ಉಡುಪಿ ನಗರದ ಜಾಮಿಯ ಮಸೀದಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್‌ ವಿಚಾರವಾಗಿ ರಾಜ್ಯದ ರೈತರಿಗೆ ತೊಂದರೆಯಾಗಬಾರದು. ಈ ಕುರಿತು ತಪ್ಪು ಮಾಹಿತಿ ಹರಡುವವರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಕ್ಫ್ ಮಂಡಳಿ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದು, ಜನರಲ್ಲಿ ತಪ್ಪು ಗ್ರಹಿಕೆ ಮೂಡಿಸಲಾಗುತ್ತಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆಯಿಂದಾಗಿ ಇಡೀ ದೇಶ ಗೊಂದಲದ ಗೂಡಾಗಿದೆ. ಕೇಂದ್ರ ಸರ್ಕಾರವು ವಿಭಜನೆಯ ನೀತಿಯನ್ನು ಬಿಡಬೇಕು ಮತ್ತು ರಾಜಧರ್ಮವನ್ನು ಪಾಲಿಸಬೇಕು. ಅನಗತ್ಯ ಗೊಂದಲದ ಕಾರಣದಿಂದಾಗಿ ಮುಸ್ಲಿಮರು ಕಂಡ ಕಂಡ ಆಸ್ತಿಯನ್ನೆಲ್ಲ ವಕ್ಫ್ ಆಸ್ತಿ ಅನ್ನುತ್ತಾರೆ ಎಂಬ ಆರೋಪ ರಾಜಕೀಯ ಪ್ರೇರಿತವಾಗಿ ಕೇಳಿಬರುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
hennabail

ಒಂದು ಅಂದಾಜಿನ ಪ್ರಕಾರ ವಕ್ಫ್ ಆಸ್ತಿಯ ಪ್ರಮಾಣ 9 ಲಕ್ಷ ಎಕರೆಗಳಿಗಿಂತಲೂ ಹೆಚ್ಚಿದೆ. ಆದರೆ ಇದು ಇರಬೇಕಾದ ಪ್ರಮಾಣಕ್ಕಿಂತ ಅದೆಷ್ಟೋಪಟ್ಟು ಕಡಿಮೆ ಇದೆ. ಹೆಚ್ಚು ಇರಬೇಕಾಗಿದ್ದ ಭೂಮಿಯನ್ನು ಬಹುತೇಕ ಕಬಳಿಸಿದ್ದು, ಮುಸ್ಲಿಮರೇ ಹೊರತು ಹಿಂದೂಗಳಲ್ಲ. ಬ್ರಿಟಿಷರು ಕೂಡ ವಕ್ಫ್ ಆಸ್ತಿ ಸಂರಕ್ಷಣೆಗೆ 1925ರಲ್ಲಿ ಕಾನೂನಾತ್ಮಕ ಸ್ವರೂಪದ ಮಂಡಳಿ ರೂಪಿಸಿದರೆ ಹೊರತು, ಎಲ್ಲಿಯೂ ಕಬಳಿಸಿದ ಅಥವಾ ಇತರ ಉದ್ದೇಶಗಳಿಗೆ ಬಳಸಿದ ಉದಾಹರಣೆ ಕಂಡು ಬರುತ್ತಿಲ್ಲ ಎಂದರು.

ವಕ್ಫ್ ಆಸ್ತಿಯ ಕಬಳಿಕೆ, ಕಳಪೆ ನಿರ್ವಹಣೆ ಮತ್ತು ಅಸಡ್ಡೆಗೆ ಮುಸ್ಲಿಂ ಸಮುದಾಯವೇ ಹೊಣೆ. ಆದರೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿರುವ ರೀತಿಯಲ್ಲಿ ವಕ್ಫ್ ಆಸ್ತಿಯು ವ್ಯಾಪಕವಾಗಿ ಅಕ್ರಮ ನೋಂದಣಿಯಾಗಿಲ್ಲ ಎಂದು ಹೇಳಿದರು.

ಮುಸ್ಲಿಮರಲ್ಲಿ ಭೂಮಿಯನ್ನು ದಾನ ಮಾಡುವುದು ಧಾರ್ಮಿಕ ಶ್ರದ್ಧೆಯ ಪ್ರಧಾನ ಭಾಗ. ಮಸೀದಿ, ಮದ್ರಸಗಳಿಗೆ ಮುಸ್ಲಿಮರು ಮಾತ್ರ ಭೂದಾನ ಮಾಡಿದ್ದಲ್ಲ, ಹಿಂದೂಗಳು ಮತ್ತು ಹಿಂದೂ ರಾಜರೂ ದೊಡ್ಡ ಪ್ರಮಾಣದಲ್ಲಿ ಭೂಮಿಯನ್ನು ಕೊಟ್ಟಿದ್ದಾರೆ. ಛತ್ರಪತಿ ಶಿವಾಜಿ ಸೇರಿದಂತೆ ಮರಾಠ ಚಕ್ರವರ್ತಿಗಳು, ವಿಜಯನಗರದ ಅರಸರು, ರಜಪೂತ ಅರಸರು ಕೂಡ ಮುಸ್ಲಿಮರಿಗೆ ಭೂದಾನ ಮಾಡಿದ ನಿದರ್ಶನಗಳಿವೆ ಎಂದರು.

ದಾನ ನೀಡಿದ ಬಹುತೇಕ ಭೂಮಿಗೆ ದಾಖಲೆಗಳು ಇರಲಿಲ್ಲ. ಈ ಕಾರಣಕ್ಕೆ ಭೂಮಿಯ ಒತ್ತುವರಿ ಮತ್ತು ಅತಿಕ್ರಮಣ ನಡೆದಿದ್ದವು. ಧಾರ್ಮಿಕ ಕೇಂದ್ರಗಳ ಆಸ್ತಿಗಳು ಮುಸ್ಲಿಮರದ್ದಾಗಲಿ, ಹಿಂದೂಗಳ ದ್ದಾಗಲಿ ಅಥವಾ ಬೇರೆ ಯಾವುದೇ ಧರ್ಮಗಳದ್ದಾಗಲಿ, ಸಂರಕ್ಷಣೆಯ ಉದ್ದೇಶದ ಶಾಸನಾತ್ಮಕ ಹಕ್ಕುಗಳ ಹೊರತಾಗಿ ಸರ್ಕಾರಕ್ಕೆ ಅವುಗಳ ಮೇಲೆ ಯಾವ ಹಕ್ಕೂ ಇರುವುದಿಲ್ಲ. ಕೇಂದ್ರ ಸರ್ಕಾರ ಸದ್ಯಕ್ಕೆ ಮುಸ್ಲಿಮರ ವಿಚಾರದಲ್ಲಿ ಕಾನೂನು ರೂಪಿಸಿ ವಕ್ಫ್ ಆಸ್ತಿಯನ್ನು ಕಬಳಿಸಲು ಹವಣಿಸುತ್ತಿದೆ, ಇದು ಖಂಡನೀಯ ಎಂದು ಮುಷ್ತಾಕ್ ಹೆನ್ನಾಬೈಲ್ ತಿಳಿಸಿದರು.

ರಾಜ್ಯದಲ್ಲಿ ವಕ್ಫ್‌ ವಿವಾದ ತಾರಕಕ್ಕೇರಿರುವ ಕಾರಣ ವಕ್ಫ್‌ಗೆ ಭೂದಾನ ಮಾಡುವ ಪ್ರಮಾಣ ಇಳಿಕೆಯಾಗಿದೆ. ದಾನ ಮಾಡಿದ ಭೂಮಿಯನ್ನು ಸರ್ಕಾರ ಉದ್ದೇಶಿತ ಕಾರ್ಯಕ್ಕೆ ಬಳಸಲ್ಲ ಎಂಬ ಆತಂಕ ಮುಸ್ಲಿಮರನ್ನು ಕಾಡುತ್ತಿದೆ ಎಂದು ಮುಸ್ಲಿಂ ಬಾಂಧವ್ಯ ವೇದಿಕೆಯ ಅನೀಸ್ ಪಾಷಾ ಹೇಳಿದರು ಹೇಳಿದರು.

ಇದನ್ನು ಓದಿದ್ದೀರಾ? ರಾಯಚೂರು | ಆರ್‌ಡಿಸಿಸಿ ಬ್ಯಾಂಕ್‌ನಲ್ಲಿ ಹಗಲು ದರೋಡೆ; ಖಾತೆಗಳ ದುರ್ಬಳಕೆ ಆರೋಪ

ಪತ್ರಿಕಾಗೋಷ್ಠಿಯಲ್ಲಿ ನಿವೃತ್ತ ಡಿವೈಎಸ್ಪಿ ಸೊಹೈಲ್ ಅಹ್ಮದ್ ಮರೂರ್ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ವೇದಿಕೆ ಕರ್ನಾಟಕ ಇದರ ಕಾರ್ಯದರ್ಶಿ ಡಾ.ಹಕೀಮ್ ತೀರ್ಥಹಳ್ಳಿ, ಗೌರವಾಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ, ಉಡುಪಿ ಜಾಮೀಯ ಮಸೀದಿ ಅಧ್ಯಕ್ಷ ರಿಯಾಝ್ ಅಹಮದ್, ನಝೀರ್ ಬೆಳುವಾಯಿ, ಮುಬಾರಕ್ ಗುಲ್ವಾಡಿ, ಜಮೀರ್ ಅಹ್ಮದ್ ರಶದಿ, ಮುಜಾಫರ್ ಹುಸೈನ್, ಜಿಯಾವುಲ್ಲಾ ಖಾನ್, ವೌಲಾನ ಅಬ್ದುಲ್ ಹಫೀಝ್ ಕಾರ್ಕಳ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...