ಉಡುಪಿ | ನೇಜಾರು ಕೊಲೆ ಪ್ರಕರಣ: ಆರೋಪಿ ಚೌಗುಲೆ ಪರ ವಕಾಲತ್ತು ಹಿಂಪಡೆದ ವಕೀಲ

Date:

ಉಡುಪಿಯ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್‌ ಚೌಗುಲೆ ಪರ ವಕೀಲರು ತಮ್ಮ ವಕಾಲತ್ತನ್ನು ಹಿಂಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿಗದಿಯಾಗಿದ್ದ ಸಾಕ್ಷ್ಯಗಳ ವಿಚಾರಣೆಯನ್ನು ಮುಂದೂಡಲಾಗಿದೆ.

ಅಕ್ಟೋಬರ್ 24 ರಂದು ನ್ಯಾಯಾಲಯವು ನವೆಂಬರ್ 20ರಂದು 1 ಹಾಗೂ 2 ಹಾಗೂ ನವೆಂಬರ್ 21ರಂದು 3 ಹಾಗೂ 4 ನೇ ಸಾಕ್ಷಗಳು ವಿಚಾರಣೆಗೆ ದಿನಾಂಕ ನಿಗದಿ ಪಡಿಸಿತ್ತು. ಅದರಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿ ಕೋರ್ಟ್‌ಗೆ ಕರೆದುಕೊಂಡು ಬರಲಾಗಿತ್ತು.

ಪ್ರಕರಣದ ತನಿಖಾಧಿಕಾರಿ ಮಲ್ಪೆ ಪೊಲೀಸ್ ವೃತ್ತನಿರೀಕ್ಷಕರ ನೇತೃತ್ವದಲ್ಲಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಸಂದರ್ಭದಲ್ಲಿ ಆರೋಪಿ ಪರ ವಕೀಲರು, ಇನ್ನು ಮುಂದೆ ನಾವು ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗುವುದಿಲ್ಲ ಮತ್ತು ನಮ್ಮ ವಕಾಲತ್ತನ್ನು ವಾಪಾಸ್ಸು ಪಡೆದುಕೊಳ್ಳುತ್ತೇವೆ ಎಂದು ಕೋರ್ಟಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದಕ್ಕೆ ಆರೋಪಿ ಚೌಗುಲೆ, ಈ ಹಿನ್ನೆಲೆಯಲ್ಲಿ ನನ್ನ ಪತ್ನಿ ಹೊಸ ವಕೀಲರನ್ನು ನೇಮಕ ಮಾಡಲಿದ್ದಾರೆ ಎಂದರು. ‘ಆಕೆಯನ್ನು ವಿಚಾರಿಸಿ ಕೂಡಲೇ ವಕೀಲರನ್ನು ನೇಮಕ ಮಾಡುವಂತೆ ನ್ಯಾಯಾಧೀಶ ಎ.ಸಮೀವುಲ್ಲಾ ಆರೋಪಿಗೆ ಸೂಚಿಸಿದರು. ವಿಚಾರಣೆಗೆ ಇಡೀ ನ್ಯಾಯಾಲಯವೇ ಸಿದ್ಧವಾಗಿರುವಾಗ ಕೊನೆ ಕ್ಷಣದಲ್ಲಿ ಆರೋಪಿ ವಕೀಲರು ವಕಾಲತ್ತು ವಾಪಾಸ್ಸು ಪಡೆದಿರುವುದಕ್ಕೆ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಆಕ್ಷೇಪ ಸಲ್ಲಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...