ಉಡುಪಿ | ಎಪಿಎಂಸಿ ಅಧಿಕಾರಿಗಳ ಭ್ರಷ್ಟಚಾರದ ವಿರುದ್ಧ ಪ್ರತಿಭಟನೆ

Date:

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧಿಕಾರಿಗಳು ಭ್ರಷ್ಟಚಾರ ಮತ್ತು ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿ ಉಡುಪಿಯ ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾಧಿಕಾರಿ ಮಹದೇವ ಈಸಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

“ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸುಮಾರು 20-25 ವರ್ಷಗಳಿಂದ ಇಲ್ಲಿಯ ವರ್ತಕರು ವ್ಯಾಪಾರವನ್ನು ಮಾಡಿಕೊಂಡು ಬಂದಿದ್ದಾರೆ. ಆದರೆ ಇಲ್ಲಿಯ ಅಧಿಕಾರಿಗಳು ಇಲ್ಲಿನ ಜಾಗವನ್ನು ಅತಿ ಕಡಿಮೆ ಬೆಲೆಗೆ (ಚ.ಅಡಿ.376%) ಮಾರಾಟ ಮಾಡಿದ್ದಾರೆ. ಇಲ್ಲಿ ಚದರ ಅಡಿಗೆ ₹2,000ದಂತೆ ಮಾರುಕಟ್ಟೆ ದರ ಇದೆ. ಆದರೆ, ಈ ಜಾಗದ ವ್ಯವಹಾರದಲ್ಲಿ ತುಂಬಾ ಲೋಪದೋಷವಿದ್ದು, ದೊಡ್ಡ ಭ್ರಷ್ಟಚಾರ ನಡೆದಿದೆ” ಎಂದು ವರ್ತಕರು ಆರೋಪಿಸಿದ್ದಾರೆ.

“ಚಿಲ್ಲರೆ ವರ್ತಕರಿಗೆ ₹250 ಪರವಾನಗಿ ಶುಲ್ಕವಿದೆ. ಆದರೆ, ಅಧಿಕಾರಿಗಳು ₹2,850ನಂತೆ ಪರವಾನಗಿ ಶುಲ್ಕ ತೆಗೆದುಕೊಂಡಿರುತ್ತಾರೆ. ರಖಂ ವ್ಯಾಪಾರಸ್ಥರಿಗೆ ₹10,000ದಿಂದ ₹20,000 ಲಂಚ ಪಡೆದಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಮಟ್ಕಾ ದಂಧೆ ನಿಯಂತ್ರಿಸಲು ಕರವೇ ಒತ್ತಾಯ

“ಆದಿ ಉಡುಪಿ ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯ ಇರುವುದಿಲ್ಲ. ಮುಖ್ಯ ರಸ್ತೆ ಹಾಳಾಗಿದೆ. ಶೌಚಾಲಯ ದುರ್ನಾತ ಬೀರುತ್ತದೆ. ನಲ್ಲಿಯಲ್ಲಿ ನೀರು ಬರುತ್ತಿಲ್ಲ. ಮಾರುಕಟ್ಟೆಯು ಸ್ವಚ್ಛವಾಗುತ್ತಿಲ್ಲ. ವಿದ್ಯುತ್‌ ವ್ಯವಸ್ಥೆಯು ಸಮರ್ಪಕವಾಗಿಲ್ಲ” ಎಂದು ನೊಂದ ವರ್ತಕರು ದೂರಿದ್ದಾರೆ.

“ಉಡುಪಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಡೆಯುವ ಅವ್ಯವಹಾರವನ್ನು ಬಯಲಿಗೆಳೆದು ನೊಂದ ವರ್ತಕರಿಗೆ ನ್ಯಾಯ ಒದಗಿಸಬೇಕು” ಎಂದು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...