ಉಡುಪಿ | ಅಂಬೇಡ್ಕರ್ ಅವಮಾನ ಮಾಡಿದ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ

Date:

ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ರವರಿಗೆ ಅವಮಾನ ಮಾಡಿ ಆಡಿದ ಮಾತುಗಳು ಮತ್ತು ಕರ್ನಾಟಕ ವಿಧಾನ ಸಭಾ ಅಧಿವೇಶನದಲ್ಲಿ ಶಾಸಕ ಸಿ.ಟಿ ರವಿಯವರು ರಾಜ್ಯದ ಮಹಿಳಾ ಮತ್ತು ಮಕ್ಕಳ ಸಚಿವರಾದ ಲಕ್ಷೀ ಹೆಬ್ಬಲ್ಕರ್ ಬಗ್ಗೆ ಅಕ್ಷೇಪಾರ್ಹಮಾತುಗಳನ್ನು ಖಂಡಿಸಿ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಮುಂದೆ ದಲಿತ ಹಕ್ಕುಗಳ ಸಮಿತಿ ಹಾಗೂ ಜನವಾದ ಮಹಿಳಾ ಸಂಘ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್ ರವರಿಗೆ ಅವಮಾನ ಮಾಡಿದ ಅಮಿತ್ ಶಾರವರಿಗೆ ಸಚಿವರಾಗಿ ಮುಂದುವರಿಯುವ ಯಾವ ಅಧಿಕಾರವೂ ಇಲ್ಲ ಅವರು ತಕ್ಷಣವೇ ರಾಜಿನಾಮೆ ಕೊಡಬೇಕು. ಕರ್ನಾಟಕದ ವಿಧಾನ ಪರಿಷತ್ನಲ್ಲಿ ಬಿಜೆಪಿಯ ಶಾಸಕ ಸಿ.ಟಿ.ರವಿಯವರು ರಾಜ್ಯದ ಮಹಿಳಾ ಸಚಿವರನ್ನು ಉದ್ದೇಶಿಸಿ ಅಕ್ಷೇಪಾರ್ಹ ಮಾತುಗಳನ್ನು ನಾವು ಖಂಡಿಸುತ್ತೆವೆ. ಸಡಿಲ ನಾಲಗೆಯ ಹಗುರ ಮಾತುಗಳಾನ್ನಾಡುವ ಚಾಳಿಯನ್ನು ಹೊಂದಿರುವ ಸಿ.ಟಿ. ರವಿಯವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಸಂಘವು ಒತ್ತಾಯಿಸಿತು.

ದೇಶದ ಸಂವಿಧಾನದ ಬೆಳಕಿನಲ್ಲಿ ಸರ್ವಸಮಾನತೆಯನ್ನು ಒಪ್ಪಿಕೊಂಡು, ಲಿಂಗಜಾತಿ ಮತ ಧರ್ಮಬೇಧವಿಲ್ಲದೇ ಬಾಳುವ ಆಶಯವನ್ನು ಹೊಂದಿರುವ ಬಹು ತತ್ವ ಭಾರತದ ಜನತೆಯಾಗಿ ನಾವು ಈ ಮೇಲಿನ ಒತ್ತಾಯಗಳನ್ನು ಮಾಡುತ್ತಿದ್ದೆವೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ಸಭೆಯಲ್ಲಿ ಜನವಾದಿ ಮಹಿಳಾ ಸಂಘದ ಜಿಲ್ಲಾ ಕಾರ್ಯದರ್ಶಿ ಶೀಲಾವತಿ, ಕುಂದಾಪುರ ಮಹಿಳಾ ಸಂಘದ ಅಧ್ಯಕ್ಷರಾದ ಬಲ್ಕೀಸ್, ಬೈಂದೂರು ಮಹಿಳಾ ಸಂಘದ ಅಧ್ಯಕ್ಷರಾದ ನಾಗರತ್ನ ನಾಡ, ಮುಖಂಡರಾದ ನಳಿನಿ.ಎಸ್, ಗಿರಿಜಾ, ರವಿಕಲಾ, ಪದ್ದು, ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಸಂಚಾಲಕ ರಾದ ಸಂಜೀವ ಬಳ್ಕೂರು, ಮುಖಂಡರಾದ ರವಿ.ವಿ.ಎಮ್‌ ಕುಂದಾಪುರ, ರಾಮ ಕಾರ್ಕಡ, ಸಾಲಿಗ್ರಾಮ, ರಂಗನಾಥ ಉಡುಪಿ, ಸಿಐಟಿಯು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಕೋಶಾಧಿಕಾರಿ ಶಶಿಧರ ಗೋಲ್ಲ, ಉಪಾಧ್ಯಕ್ಷ ರಾದ ಎಚ್.ನರಸಿಂಹ, ಚಿಕ್ಕ ಮೊಗವೀರ, ಕಾರ್ಯದರ್ಶಿ ಚಂದ್ರಶೇಖರ, ಸಿಐಟಿಯು ಉಡುಪಿ ವಲಯ ಸಂಚಾಲಕ ರಾದ ಕವಿರಾಜ್. ಎಸ್.ಕಾಂಚನ್, ಮುಖಂಡರಾದ ಸುಭಾಸ್ ನಾಯಕ್, ಸದಾಶಿವ ಪೂಜಾರಿ, ಉಮೇಶ್ ಕುಂದರ್, ಮೋಹನ್ ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘದ ಜಿಲಾ ಕಾರ್ಯದರ್ಶಿ ವೆಂಕಟೇಶ ಕೋಣಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...