ಉಡುಪಿ | ಸೀರತ್ ಅಭಿಯಾನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ

Date:

ಜಮಾಅತೆ ಇಸ್ಲಾಮೀ ಹಿಂದ್‌ ಸಂಘಟನೆ ಹಮ್ಮಿಕೊಂಡಿರುವ ‘ಪ್ರವಾದಿ ಮಹಮ್ಮುದ್(ಸ) ಮಹಾನ್ ಚಾರಿತ್ರ್ಯವಂತ -ಸೀರತ್ ಅಭಿಯಾನ’ದ ಪ್ರಯುಕ್ತ ಇಂದು ಉಡುಪಿಯ ಜಾಮಿಯ ಮಸೀದಿ ಆವರಣದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜು ಹಾಗೂ ಜೀವ ಸಂಜೀವಿನಿ ಉಡುಪಿ ಇವರ ಸಹಯೋಗದೊಂದಿಗೆ
ಎಸ್ ಐ ಓ ಉಡುಪಿ ಜಿಲ್ಲೆ, ಸಾಲಿಡಾರಿಟಿ ಯೂತ್ ಮೂವ್‌ಮೆಂಟ್, ಗರ್ಲ್ಸ್ ಇಸಾಮಿಕ್ ಆರ್ಗನೈಸೇಶನ್ ಹಾಗೂ ಹುಮ್ಯಾನಿಟೇರಿಯನ್ ರಿಲೀಫ್ ಸೊಸೈಟಿಯ ಸಂಯೋಜನೆಯೊಂದಿಗೆ ಈ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ಸುಮಾರು 50 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

IMG 20240916 WA0059

ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕಸ್ತೂರಿ ಬಾ ಮೆಡಿಕಲ್ ಕಾಲೇಜಿನ ಡಾ ಮಹಮ್ಮದ್ ಅಝೀಝ್ ಮಾತನಾಡಿ, “ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನ. ಪ್ರತಿನಿತ್ಯ ಸಾವಿರಾರು ಜನರು ಸರಿಯಾದ ಸಮಯಕ್ಕೆ ರಕ್ತ ಸಿಗದೆ ಸಾವನ್ನಪ್ಪುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಕ್ತದ ಅವಶ್ಯಕತೆ ಬಹಳಷ್ಟು ಇದೆ. ಇದನ್ನು ಮನಗಂಡು ಸಂಘಟಕರು ರಕ್ತದಾನ ಶಿಬಿರವನ್ನು ಆಯೋಜಿಸಿದ್ದು ಉತ್ತಮ ಕಾರ್ಯವಾಗಿದೆ” ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಬಿರದಲ್ಲಿ ಎಸ್ ಐ ಓ ರಾಜ್ಯ ಕಾರ್ಯದರ್ಶಿ ನಾಸೀರ್ ಹೂಡೆ, ಉಡುಪಿ ಜಿಲ್ಲಾಧ್ಯಕ್ಷ ಅಯಾನ್ ಮಲ್ಪೆ, ಸಾಲಿಡಾರಿಟಿ ಯೂಥ್ ಮೂವ್ ಮೆಂಟ್ ಉಡುಪಿ ಜಿಲ್ಲಾಧ್ಯಕ್ಷ ನಬೀಲ್ ಗುಜ್ಜರಬೆಟ್ಟು, ಹುಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ ಉಡುಪಿ ಜಿಲ್ಲಾ ಸಂಚಾಲಕ ಬಿಲಾಲ್ ಮಲ್ಪೆ, ಅನ್ವರ್ ಅಲಿ ಕಾಪು, ಜಿಐಓ ಜಿಲ್ಲಾಧ್ಯಕ್ಷೆ ನುಝ್ಲಾ ಫಾತಿಮಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...