ಉಡುಪಿ | ಬನ್ಸ್ ರಾಘು ಹತ್ಯೆ ಪ್ರಕರಣ; ಆರೋಪಿಗಳು 3 ದಿನ ಪೊಲೀಸ್ ಕಸ್ಟಡಿಗೆ

Date:

ಉಡುಪಿ ಜಿಲ್ಲೆಯ ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್‌(42) ಅಲಿಯಾಸ್ ಬನ್ಸ್ ರಾಘು ಎನ್ನುವರರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಶುಕ್ರವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಶಿವಮೊಗ್ಗ ಮೂಲದ ಶಫಿವುಲ್ಲಾ(40) ಮತ್ತು ಇಮ್ರಾನ್(43) ಬಂಧಿತ ಆರೋಪಿಗಳು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು 2ನೇ ಹೆಚ್ಚುವರಿ ಸಿವಿಲ್ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನೆಲೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಕುಂದಾಪುರ ಠಾಣೆ ನಿರೀಕ್ಷಕ ನಂದಕುಮಾರ್, ಅಪರಾಧ ವಿಭಾಗದ ಪಿಎಸ್ಐ ಪ್ರಸಾದ್, ಪಿಎಸ್ಐ ವಿನಯ್ ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳನ್ನು ಮೊದಲಿಗೆ ಕುಂದಾಪುರ ಸಾರ್ವಕನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಹಿನ್ನೆಲೆ 

ಕುಂದಾಪುರ ನಗರದ ಚಿಕ್ಕನ್‌ ಸಾಲ್‌ ರಸ್ತೆಯ ಅಂಚೆ ಕಚೇರಿ ಸಮೀಪದ ಡೆಲ್ಲಿ ಬಜಾರ್‌ ಬಳಿ ಭಾನುವಾರ ಸಂಜೆ ಮಾರಕಾಸ್ತ್ರದಿಂದ ಇರಿದು ರಾಘವೇಂದ್ರ ಶೇರುಗಾರ್‌ ಎಂಬುವವರನ್ನು ಹತ್ಯೆ ಮಾಡಿದ್ದರು. ಕೃತ್ಯ ನಡೆದ ಕೂಡಲೇ ಪೊಲೀಸ್ ಇಲಾಖೆ ಆರೋಪಿಗಳ ಬಂಧನಕ್ಕೆ ಕಾರ್ಯಪ್ರವೃತ್ತರಾಗಿದ್ದು, ತದನಂತರ ಉಡುಪಿ ಎಸ್‌ಪಿ ಡಾ. ಅರುಣ್ ಕೆ. ಅವರು ಮೂರು ವಿಶೇಷ ತನಿಖಾ ತಂಡ ರಚಿಸಿದ್ದರು.

ಈ ಸುದ್ದಿ ಓದಿದ್ದೀರಾ? ಹಾಸನ | ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

ಪೊಲೀಸರ ತಂಡಗಳು ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದರು. ಬಳಿಕ ಸಿಸಿ ಟಿವಿ ದೃಶ್ಯಾವಳಿ ಸಹಿತ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ್ದು, ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಕಲೆಹಾಕಿ ಆರೋಪಿಗಳ ಪತ್ತೆಗೆ ಶಿವಮೊಗ್ಗ, ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ತನಿಖಾ ತಂಡ ತೆರಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...