ಉಡುಪಿ | ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ

Date:

ಯಕ್ಷಗಾನ ರಂಗದ ಶ್ರೇಷ್ಠ ಸಾಧಕ, ಪ್ರಸಂಗಕರ್ತ, ಖ್ಯಾತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ಬೆಳಗ್ಗೆ (ನ.26) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದಲೇ ಪ್ರಸಿದ್ಧರಾಗಿದ್ದರು. ಕಂದಾವರ ರಘುರಾಮ ಶೆಟ್ಟಿಯವರು ದಕ್ಷಿಣ ಕನ್ನಡದ ಕುಂದಾಪುರ ತಾಲೂಕಿನ ಬಳ್ಳೂರು ಗ್ರಾಮದ ಕಂದಾವರದಲ್ಲಿ 1936 ರಲ್ಲಿ ಕರ್ಕಿ ಸದಿಯಣ್ಣ ಶೆಟ್ಟಿ. ತಾಯಿ ಕಂದಾವರ ಪುಟ್ಟಮ್ಮ ದಂಪತಿಯ ಪುತ್ರನಾಗಿ ಜನಿಸಿದ್ದರು.

ತಮ್ಮ ಪತ್ನಿ, ಮಕ್ಕಳು ಮೊಮ್ಮಕ್ಕಳ ಜತೆ ನೂಜಾಡಿಯಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ತಮ್ಮ ಆರಂಭದ ಬದುಕಿನಲ್ಲಿ ‘ಕಂಡ್ಲೂರು ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ-ಶಿಕ್ಷಕರಾಗಿ, ಮುಖ್ಯೋಪಾಧ್ಯರಾಗಿ, ಸುಮಾರು 35 ವರ್ಷಗಳ ಕಾಲ ಸೇವೆ ಮಾಡಿದ್ದ ಕಂದಾವರ ರಘುರಾಮ ಶೆಟ್ಟಿಯವರು, ‘ಮಾದರಿ ಶಿಕ್ಷಕ’ ಪ್ರಶಸ್ತಿಗೆ ಭಾಜನರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತ್ಯ, ಸಂಗೀತ, ಯಕ್ಷಗಾನ ರಂಗದಲ್ಲಿ ಕಂದಾವರ ರಘುರಾಮ ಶೆಟ್ಟಿಯವರು ವಿದ್ಯಾರ್ಥಿಯಾಗಿದ್ದಾಗಲೇ ಮಕ್ಕಳ ಯಕ್ಷಗಾನದಲ್ಲಿ ಭಾಗವತಿ ಮಾಡಿ ಬಾಲ ಭಾಗವತ ಎಂದು ಖ್ಯಾತರಾಗಿದ್ದರು. ದಿವಂಗತ ಎಂ. ಎಂ. ಹೆಗ್ಡೆಯವರ ಕೂಟದಲ್ಲಿ ಹವ್ಯಾಸಿಯಾಗಿ ಪಾತ್ರನಿರ್ವಹಣೆ ಮಾಡುತ್ತಿದ್ದರು. ಅರ್ಥಧಾರಿಯಾಗಿಯೂ ಖ್ಯಾತನಾಮ ಅರ್ಥಧಾರಿಗಳ ಜತೆ ‘ತಾಳಮದ್ದಲೆ’ಯಲ್ಲಿಯೂ ಖ್ಯಾತಿ ಪಡೆದಿದ್ದರು.

1978 ರಿಂದ ಪ್ರಸಂಗಕರ್ತರಾಗಿ ಕಂದಾವರ ರಘುರಾಮ ಶೆಟ್ಟಿಯವರು ‘ಯಕ್ಷಗಾನ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡುತ್ತಿದ್ದರು. ಚೆಲುವೆ ಚಿತ್ರಾವತಿ, ರತಿ ರೇಖಾ, ಶ್ರೀ ದೇವಿ ಬನಶಂಕರಿ ಮತ್ತು ಶೂದ್ರ ತಪಸ್ವಿನಿಯಂತಹ ಸೂಪ‌ರ್ ಹಿಟ್ ಪ್ರಸಂಗಗಳನ್ನು ಕೊಡುಗೆಯಾಗಿ ನೀಡಿದ್ದರು.

ಕಂದಾವರ ರಘುರಾಮ ಶೆಟ್ಟಿಯವರ ನಿಧನದಿಂದ ಯಕ್ಷಗಾನ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ಕುಟುಂಬ ಬಳಗದವರಿಗೆ ನೀಡಲೆಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿ ಸರ್ವ ಸದಸ್ಯರು ಸಂತಾಪ ಸೂಚಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...